ಜು.24ಕ್ಕೆ ‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ತೆರೆಗೆ

ರಾಗಿಣಿ ದ್ವಿವೇದಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ ‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ಸಿನಿಮಾ ಜುಲೈ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ್ದಾರೆ.  ನೀರು, ಆಹಾರದ ಮಹತ್ವ ಸಾರುವ ಈ ಚಿತ್ರ ರೇಷನ್ ಅಂಗಡಿಗಳ ಪ್ರಾಮುಖ್ಯತೆಯ ಕುರಿತು ಮೂಡಿಬಂದ  ಚಿತ್ರವಾಗಿದೆ.

ಜಯಶಂಕರ್ ಟಾಕೀಸ್ ಬ್ಯಾನರ್ ಅಡಿಯಲ್ಲಿ ತೇಜು ಚೆಲುವಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾ.ಮಾ. ಹರೀಶ್ ಹಾಗೂ ಚಲನಚಿತ್ರ ನಿರ್ಮಾಪಕರ ಸಂಘದ ಹಾಲಿ ಕಾರ್ಯದರ್ಶಿ ಭಾ.ಮಾ. ಗಿರೀಶ್ ತಂಡಕ್ಕೆ ಬೆಂಬಲ ನೀಡಿದ್ದಾರೆ. ಮಾಜಿ ಸಚಿವ  ಕುಮಾರ್ ಬಂಗಾರಪ್ಪ,  ಹಿರಿಯ ನಟ ದೊಡ್ಡಣ್ಣ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಹಿರಿಯ ನಿರ್ದೇಶಕ ಬಿ. ರಾಮಮೂರ್ತಿ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದಿದ್ದಾರೆ. ಸಾತ್ವಿಕ್ ಪವನ್  ನಿರ್ದೇಶನ ಹಾಗೂ ಛಾಯಾಗ್ರಹಣದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಅನಂತ್ ಆರ್ಯನ್ ಮತ್ತು ಪ್ರವೀಣ್ ಅವರ ಜಂಟಿ ಸಂಗೀತ ನಿರ್ದೇಶನವಿದೆ.  ‘ಶ್ರೀಧರ್ ಕೃಪ ಕಂಬೈನ್ಸ್’ ಸಂಸ್ಥೆಯ ಶ್ರೀಧರ್ ಅವರು  ಚಿತ್ರವನ್ನು ಕರ್ನಾಟಕದಾದ್ಯಂತ ವಿತರಣೆ ಮಾಡುತ್ತಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!