ಸಮಾಜ ಸೇವೆಗೆ ಮುಂದಾದ ರಿಷಬ್ ಶೆಟ್ಟಿ

ಕನ್ನಡ ಚಿತ್ರರಂಗದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ರಿಷಬ್ ಶೆಟ್ಟಿ ಫೌಂಡೇಷನ್’ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಡ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ರಿಷಬ್ ಶೆಟ್ಟಿ ಅವರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ಹೈಟೆಕ್ ಸ್ಪರ್ಶ ನೀಡುವ ಮೂಲಕ ಮಕ್ಕಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವ ಕಾರ್ಯವನ್ನು ಈ ಫೌಂಡೇಷನ್ ಕೈಗೊಂಡಿದೆ.

ರಿಷಬ್ ಶೆಟ್ಟಿ ಅವರು ಶಿಕ್ಷಣ ಪಡೆದ ಸರ್ಕಾರಿ ಶಾಲೆಯನ್ನೇ ದತ್ತು ಪಡೆದು ಆಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಿದ್ದಾರೆ. ಫೌಂಡೇಷನ್ ಹಲವು ಶಿಕ್ಷಣ ಯೋಜನೆಗಳನ್ನು ಜಾರಿಗೆ ತಂದಿದೆ. ಆರ್ಥಿಕ ಸಂಕಷ್ಟದಲ್ಲಿರುವ ಕೂಲಿ ಕಾರ್ಮಿಕರು, ರೈತರು, ಹೋಟೆಲ್ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡುವ ಮೂಲಕ ಉನ್ನತ ಶಿಕ್ಷಣಕ್ಕೆ ನೆರವಾಗುತ್ತಿದೆ.

ಫೌಂಡೇಷನ್ ಮೂಲಕ ನೆರವು ಪಡೆದ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಮುಂದುವರಿಸಲು ಸಾಧ್ಯವಾಗಿದೆ. ಕೆಲ ವಿದ್ಯಾರ್ಥಿಗಳು ಪೋಷಕರನ್ನು ಕಳೆದುಕೊಂಡ ಬಳಿಕ ರಿಷಬ್ ಶೆಟ್ಟಿ ಫೌಂಡೇಶನ್ ನೀಡಿದ ನೆರವಿನಿಂದ ತಮ್ಮ ಕನಸುಗಳನ್ನು ಈಡೇರಿಸಿಕೊಳ್ಳಲು ಸಾಧ್ಯವಾಗಿದೆ. ರಿಷಬ್ ಶೆಟ್ಟಿ ಅವರ ಸಾಮಾಜಿಕ ಸೇವೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!