ಕನ್ನಡ ಭಾಷೆ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ರಾಜ್ಯಸಭಾ ಸದಸ್ಯ ಕಮಲ್ ಹಾಸನ್ ವಿರುದ್ಧ ದಾಖಲಾಗಿದ್ದ ದೂರನ್ನು ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ (ಎಸಿಜೆಎಂ) ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.
ಘಟನೆ ಸಂಬಂಧ ಕನಕಪುರ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿತ್ತು. ಆದರೆ ಕಮಲ್ ಅವರು ಇತ್ತೀಚೆಗೆ ತಮಿಳುನಾಡಿನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.
ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸಿದ 42ನೇ ವಿಶೇಷ ಎಸಿಜೆಎಂ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದೆ.
2025ರಲ್ಲಿ ‘ಥಗ್ ಲೈಫ್’ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ಅವರು ‘ತಮಿಳು ಭಾಷೆ ಕನ್ನಡ ಭಾಷೆಯ ತಾಯಿ’ ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕರ್ನಾಟಕದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಗ್ಗೆ ವಿವಿಧ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಚಿತ್ರ ಬಿಡುಗಡೆಗೆ ಅಡ್ಡಿ ಮಾಡಿದ್ದವು.
__





Be the first to comment