ನಟಿ ರಶ್ಮಿಕಾ ಮಂದಣ್ಣ ‘ಮೈಸಾ’ ಚಿತ್ರದ ಅಂಡರ್‌ವಾಟರ್ ಆಕ್ಷನ್ ಸೀಕ್ವೆನ್ಸ್‌ನಲ್ಲಿ ಯಾವುದೇ ಡೂಪ್ ಬಳಸದೆ ಸುಮಾರು 20 ಗಂಟೆಗಳ ಕಾಲ ನೀರಿನಡಿ ಸಾಹಸ ದೃಶ್ಯಗಳನ್ನು ಚಿತ್ರೀಕರಿಸಿದ್ದಾರೆ.
ಮಹಿಳಾ ಪ್ರಧಾನ ಸಿನಿಮಾ ‘ಮೈಸಾ’ ಚಿತ್ರದಲ್ಲಿ ರಶ್ಮಿಕಾ ಸಂಪೂರ್ಣ ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಬಿಡುಗಡೆಯಾದ ಪೋಸ್ಟರ್‌ಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಇದೀಗ ಅಂಡರ್‌ವಾಟರ್ ಫೈಟ್ ಸೀಕ್ವೆನ್ಸ್ ಯಶಸ್ವಿಯಾಗಿ ಪೂರ್ಣಗೊಂಡಿರುವುದಾಗಿ ಚಿತ್ರತಂಡ ಘೋಷಿಸಿದೆ.
ಸಾಮಾನ್ಯವಾಗಿ ಅಪಾಯಕಾರಿ ಸಾಹಸ ದೃಶ್ಯಗಳಿಗೆ ಡೂಪ್ ಬಳಸಲಾಗುತ್ತದೆ. ಆದರೆ ಈ ಚಿತ್ರದಲ್ಲಿ ರಶ್ಮಿಕಾ ಸ್ವತಃ ಎಲ್ಲಾ ಸಾಹಸ ದೃಶ್ಯಗಳಲ್ಲಿ ಭಾಗವಹಿಸಿದ್ದಾರೆ. ಯಾವುದೇ ಡೂಪ್ ಬಳಸಿಲ್ಲ. ಚಿತ್ರೀಕರಣಕ್ಕಾಗಿ ರಶ್ಮಿಕಾ ಮಂದಣ್ಣ ಅವರು ಸತತ ಎರಡು ದಿನಗಳ ಕಾಲ ನೀರಿನಲ್ಲಿ ಕಳೆದಿದ್ದಾರೆ.
‘ಮೈಸಾ’ ಚಿತ್ರದ ಸಾಹಸ ದೃಶ್ಯಗಳ ಕೆಲ ಝಲಕ್‌ಗಳನ್ನು ಚಿತ್ರತಂಡ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಭಾರತೀಯ ಚಿತ್ರರಂಗದಲ್ಲಿ ಇದು ಹೊಸ ದಾಖಲೆ ಬರೆಯಲಿದೆ ಎಂದು ಚಿತ್ರತಂಡ ವಿಶ್ವಾಸ ವ್ಯಕ್ತಪಡಿಸಿದೆ.
ಶೀಘ್ರದಲ್ಲೇ ‘ಮೈಸಾ’ ಚಿತ್ರದ ಟೀಸರ್ ಬಿಡುಗಡೆಯಾಗಲಿದ್ದು, ಇದೇ ವರ್ಷ ಸಿನಿಮಾ ಬಿಡುಗಡೆಯಾಗಲಿದೆ.
—





Be the first to comment