ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು ನಾಯಕನಾಗಿ ನಟಿಸಿರುವ ಚಿತ್ರ ‘ದಿಲ್ದಾರ್’ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆಗೊಂಡಿದೆ.
ಮಾಸ್ ಪಾತ್ರಗಳ ಮೂಲಕ ಗಮನ ಸೆಳೆದಿರುವ ಶ್ರೇಯಸ್ ಮಂಜು ಈ ಚಿತ್ರದಲ್ಲಿ ಮತ್ತೊಂದು ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುಳಿವು ಸಿಕ್ಕಿದೆ. ಯಸ್ ಮಂಜು ಈ ಹಿಂದೆ ಕಾಣಿಸಿಕೊಂಡಿರದ ಪಾತ್ರದಲ್ಲಿ ನಟಿಸಿದ್ದಾರೆ.
ಏನ್ಸಿಯಂಟ್ ಮೂವೀಸ್ ಬ್ಯಾನರಿನಡಿಯಲ್ಲಿ ಆರ್. ಸಂತೋಷ್ ಕುಮಾರ್ (ಎಸ್ವಿಟಿ) ನಿರ್ಮಾಣ ಮಾಡಿರುವ ‘ದಿಲ್ದಾರ್’ ಚಿತ್ರ ಚಿತ್ರೀಕರಣ ಮುಗಿಸಿಕೊಂಡು ಬಿಡುಗಡೆಯ ಹೊಸ್ತಿಲಲ್ಲಿದೆ. ಈಗ ಫಸ್ಟ್ ಲುಕ್ ಟೀಸರ್ ಮೂಲಕ ಪ್ರೇಕ್ಷಕರನ್ನು ತಲುಪಲು ಚಿತ್ರತಂಡ ಪ್ರಯತ್ನಿಸಿದೆ. ಭಿನ್ನವಾದ ಪ್ರೇಮ ಕಥಾನಕವನ್ನೊಳಗೊಂಡ ಪಕ್ಕಾ ಆಕ್ಷನ್ ಚಿತ್ರ ಎಂದು ಚಿತ್ರತಂಡ ಹೇಳಿಕೊಂಡಿದೆ.
ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದಲ್ಲಿ ಕೀರ್ತಿ ಕೃಷ್ಣ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಕೆಜಿಎಫ್ ಖ್ಯಾತಿಯ ಆಂಡ್ರೋ ಅವಿನಾಶ್, ಭಜರಂಗಿ ಲೋಕಿ, ಅರ್ಪಿತ್ ಖಳ ನಟರಾಗಿ ಅಬ್ಬರಿಸಿದ್ದಾರೆ. ಸಾಧು ಕೋಕಿಲಾ, ಚಂದ್ರಪ್ರಭ, ಕಾರ್ತಿಕ್, ಚಿಲ್ಲರ್ ಮಂಜು ಮುಂತಾದ ಹಾಸ್ಯ ನಟರ ದಂಡೇ ಈ ಚಿತ್ರದಲ್ಲಿದೆ. ಹರೇಕೃಷ್ಣ ರೆಡ್ಡಿ ಎಸ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.





Be the first to comment