ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾದ ಟ್ರೈಲರ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.
ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ ಜುಲೈ 23ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಕೆವಿಎನ್ ಪ್ರೊಡಕ್ಷನ್ಸ್ ಬಿಡುಗಡೆ ಮಾಡಿರುವ ಟ್ರೈಲರ್ ನಲ್ಲಿ ವಿಜಯ್ ಖಡಕ್ ಆ್ಯಕ್ಷನ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಖಳನಾಯಕರ ವಿರುದ್ಧ ಗನ್ ಹಿಡಿದು ಹೋರಾಡುವ ದೃಶ್ಯಗಳು, ಪೊಲೀಸ್ ಪಡೆ ನಡುವೆ ಅಬ್ಬರಿಸುವ ಸನ್ನಿವೇಶಗಳು ಅಭಿಮಾನಿಗಳ ಗಮನ ಸೆಳೆದಿದೆ.
ಹೆಚ್. ವಿನೋದ್ ನಿರ್ದೇಶನದ ‘ಜನ ನಾಯಗನ್’ ಸಿನಿಮಾ ಸಂಕ್ರಾಂತಿ ಬಿಡುಗಡೆಗೆ ಸಜ್ಜಾಗಿದ್ದರೂ, ಸೆನ್ಸಾರ್ ಪ್ರಕ್ರಿಯೆಯ ಅಡಚಣೆಯಿಂದ ಬಿಡುಗಡೆ ಮುಂದೂಡಲ್ಪಟ್ಟಿತ್ತು. ಕಾನೂನು ಹೋರಾಟದ ನಂತರ ಚಿತ್ರಕ್ಕೆ ‘ಎ’ ಪ್ರಮಾಣಪತ್ರ ದೊರೆತಿದೆ.
2023ರ ತೆಲುಗಿನ ಸೂಪರ್ ಹಿಟ್ ‘ಭಗವಂತ್ ಕೇಸರಿ’ ಚಿತ್ರದ ರಿಮೇಕ್ ಎಂದು ಹೇಳಲಾಗುತ್ತಿರುವ ‘ಜನ ನಾಯಗನ್’,ವಿಜಯ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಿಡುಗಡೆಯಾಗುತ್ತಿರುವ ಮೊದಲ ಚಿತ್ರವಾಗಿದೆ. ಈ ಬಿಗ್ ಬಜೆಟ್ ಸಿನಿಮಾದಲ್ಲಿ ಪೂಜಾ ಹೆಗ್ಡೆ, ಬಾಬಿ ಡಿಯೋಲ್, ಮಮಿತಾ ಬೈಜು, ಗೌತಮ್ ವಾಸುದೇವ್ ಮೆನನ್, ಪ್ರಕಾಶ್ ರಾಜ್ ಹಾಗೂ ಪ್ರಿಯಾಮಣಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
—





Be the first to comment