ಹಿರಿಯ ಪತ್ರಕರ್ತ ಜಯಪ್ರಕಾಶ್ ಶೆಟ್ಟಿ ಮೊದಲ ಬಾರಿಗೆ ತುಳು ಸಿನಿಮಾ ‘ಬನ’ದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಕರಾವಳಿ ಸಂಸ್ಕೃತಿ, ನಾಗಾರಾಧನೆ ಮತ್ತು ಜನಪದ ನಂಬಿಕೆಗಳನ್ನು ಆಧರಿಸಿದ ‘ಬನ’ಸಿನಿಮಾ ಅಕ್ಟೋಬರ್ 23ರಂದು ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.
ನಾಗರ ಪಂಚಮಿ ಹಬ್ಬದ ಪ್ರಯುಕ್ತ ‘ಬನ’ ಚಿತ್ರದ ಟ್ರೇಲರ್ ಬಿಡುಗಡೆಗೊಳ್ಳಲಿದೆ. ಈ ಸಿನಿಮಾದ ಫಸ್ಟ್ಲುಕ್ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಿನಿರಸಿಕರ ಗಮನ ಸೆಳೆದಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ರೂಪ ವರ್ಕಡಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
‘ಈಶಿ ಪ್ರೊಡಕ್ಷನ್’ ಬ್ಯಾನರ್ ಅಡಿಯಲ್ಲಿ ಮನೋಹರ್ ರೈ ವೈಪಾಲ ಈ ಚಿತ್ರವನ್ನು ನಿರ್ಮಿಸಿದ್ದಾರೆ. ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
‘ಬನ’ ಸಿನಿಮಾ ಕರಾವಳಿ ಭಾಗದ ಸಂಸ್ಕೃತಿ, ನಾಗಾರಾಧನೆ ಹಾಗೂ ಜನಪದ ಕಥೆಗಳನ್ನು ಪ್ರೇಕ್ಷಕರಿಗೆ ಹೊಸ ಅನುಭವದೊಂದಿಗೆ ಪರಿಚಯಿಸಲಿದ್ದು, ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ಪಡೆಯುವ ವಿಶ್ವಾಸವನ್ನು ಚಿತ್ರತಂಡ ವ್ಯಕ್ತಪಡಿಸಿದೆ. ಕರಾವಳಿ ಭಾಗದ ಸಂಸ್ಕೃತಿ ಮತ್ತು ಪರಂಪರೆಯನ್ನು ವಿಭಿನ್ನವಾಗಿ ತೆರೆ ಮೇಲೆ ತರುವ ಪ್ರಯತ್ನ ಇದಾಗಿದೆ ಎಂದು ಚಿತ್ರತಂಡ ತಿಳಿಸಿದೆ.





Be the first to comment