‘ಬ್ರಹ್ಮ ಕಮಲ’ ಟ್ರೈಲರ್ ಬಿಡುಗಡೆ

ಸಿದ್ದು ಪೂರ್ಣಚಂದ್ರ ನಿರ್ದೇಶನ ಮಾಡಿರುವ ‘ಬ್ರಹ್ಮ ಕಮಲ’ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿದೆ.

ಈ ಹಿಂದೆ ‘ದಾರಿ ಯಾವುದಯ್ಯ ವೈಕುಂಠಕೆ’ ಚಿತ್ರದ ಮೂಲಕ ನಿರ್ದೇಶಕರಾಗಿ ಮನ್ನಣೆ ಗಳಿಸಿದ   ಸಿದ್ದು ಪೂರ್ಣಚಂದ್ರ  ಅವರು ಮತ್ತೊಂದು ಸೂಕ್ಷ್ಮ ಕಥನಕ್ಕೆ ದೃಶ್ಯರೂಪ ನೀಡಿದ್ದಾರೆ. ‘ಬ್ರಹ್ಮಕಮಲ’ ಸಿನಿಮಾದ ಟ್ರೈಲರ್  ಪ್ರೇಕ್ಷಕರ ವಲಯದಲ್ಲಿ ಚರ್ಚೆಗೆ ಅನುವು ಮಾಡಿ ಕೊಟ್ಟಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಬ್ರಹ್ಮ ಕಮಲ’ಕ್ಕೆ  ಮೆಚ್ಚುಗೆ ಸಿಕ್ಕಿದೆ. ಪ್ರೇಕ್ಷಕರ ಒತ್ತಾಯದ ಮೇರೆಗೆ ಮೂರು ಪ್ರದರ್ಶನಗಳನ್ನು ಕಂಡಿದೆ. ಚಿತ್ರವೀಗ ಟ್ರೈಲರ್ ಮೂಲಕ ಸದ್ದು ಮಾಡಲಾರಂಭಿಸಿದೆ.

ಈ ಸಿನಿಮಾ ಪೂರ್ಣ ಚಂದ್ರ ಫಿಲಂಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿದೆ. ಅದ್ವಿತಿ ಶೆಟ್ಟಿ, ಋತು ಚೈತ್ರ, ಲೋಕೇಂದ್ರ ಸೂರ್ಯ, ಬಾಲ ರಾಜ್ವಾಡಿ, ಮಮತಾ ರಾಹುತ್, ಪ್ರಮೀಳಾ ಸುಬ್ರಮಣ್ಯ ಮುಂತಾದವರ ತಾರಾಗಣ  ಚಿತ್ರಕ್ಕಿದೆ.

ಲೋಕೇಂದ್ರ ಸೂರ್ಯ ಛಾಯಾಗ್ರಹಣ, ಅನಂತ್ ಆರ್ಯನ್ ಸಂಗೀತ ನಿರ್ದೇಶನ, ದೀಪು ಸಂಕಲನ, ನಾಗರತ್ನ  ಕೆ.ಹೆಚ್ ನಿರ್ಮಾಣ  ಚಿತ್ರಕ್ಕಿದೆ. ಪುಟ್ಟರಾಜು ಮತ್ತು ಪ್ರಮೀಳಾ ಸುಬ್ರಮಣ್ಯ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ‘ಬ್ರಹ್ಮಕಮಲ’  ಚಿತ್ರದ ಬಿಡುಗಡೆ ದಿನಾಂಕ ಶೀಘ್ರದಲ್ಲಿಯೇ ಘೋಷಣೆ ಆಗಲಿದೆ.

 

Be the first to comment

Leave a Reply

Your email address will not be published. Required fields are marked *

Translate »
error: Content is protected !!