ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಷ್ , ಮಾಫಿ ಸಾಕ್ಷಿ ಆಗಿ ಪರಿಗಣಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ದರ್ಶನ್ ಗಾಗಿ ಪತ್ನಿ ವಿಜಯಲಕ್ಷ್ಮೀ ದೇವರ ಮೊರೆ ಹೋಗಿದ್ದಾರೆ.
ವಿಜಯಲಕ್ಷ್ಮೀ ತಮ್ಮ ಇನ್ಸ್ಟಾಗ್ರಾಂನಲ್ಲಿ ಕಾಮಾಕ್ಯ ದೇವರ ಚಿತ್ರಗಳನ್ನು ಹಂಚಿಕೊಂಡಿದ್ದು, ‘ದೇವರಿಗೆ ಗೊತ್ತು ಅಷ್ಟೆ ಸಾಕು’ ಎಂದು ಬರೆದುಕೊಂಡಿದ್ದಾರೆ. ವಿಜಯಲಕ್ಷ್ಮೀ ದರ್ಶನ್ ಗಾಗಿ ಅಗತ್ಯ ಕಾನೂನು ನೆರವು ಸಿಗುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಯಾವುದು ಕೈಗೂಡುತ್ತಿಲ್ಲ. ಹೀಗಾಗಿ ವಿಜಯಲಕ್ಷ್ಮೀ ದೇವರ ಮೊರೆ ಹೋಗಿದ್ದಾರೆ.
ಕೊಲೆ ಪ್ರಕರಣದ 14ನೇ ಆರೋಪಿ ದರ್ಶನ್ ಆಪ್ತ ಪ್ರದೋಶ್, ತಮ್ಮನ್ನು ಮಾಫಿ ಸಾಕ್ಷಿ ಆಗಿ ಪರಿಗಣಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿರುವುದು ದರ್ಶನ್ ಸಂಕಷ್ಟಕ್ಕೆ ಸಿಲುವಂತೆ ಮಾಡಿದೆ.
ಪ್ರದೋಷ್ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು ದರ್ಶನ್ ಆಕ್ಷೇಪಣೆ ಸಲ್ಲಿಸಿದ್ದರು. ಆದರೆ ಮಾಫಿ ಸಾಕ್ಷಿಗೆ ಆಕ್ಷೇಪಣೆ ಸಲ್ಲಿಸಲು ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಯಾವುದೇ ಹಕ್ಕು ಇಲ್ಲ ಎಂದು 59ನೇ ಸಿಸಿಹೆಚ್ ಕೋರ್ಟ್ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ದರ್ಶನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರದೋಷ್ ವಿಚಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿ ದರ್ಶನ್ ಪರ ವಕೀಲರಾದ ಹಷ್ಮತ್ ಪಾಷಾ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.





Be the first to comment