ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡದ ಸಹ-ಒಡತಿ ಕಾವ್ಯಾ ಮಾರನ್ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ.
ಎರಡು ವರ್ಷಗಳಿಂದ ಅನಿರುದ್ಧ್, ಕಾವ್ಯಾ ರಿಲೇಷನ್ಶಿಪ್ನಲ್ಲಿದ್ದಾರೆ ಎನ್ನುವ ಸುದ್ದಿ ಕಾಲಿವುಡ್, ಟಾಲಿವುಡ್ ವಲಯದಲ್ಲಿ ಭಾರೀ ಸದ್ದು ಮಾಡಿದೆ. ಇಬ್ಬರು ಮದುವೆ ಆಗಲಿರುವ ಡೇಟ್ ಕೂಡ ಹರಿದಾಡಿದೆ. ಸುದ್ದಿಗಳ ಪ್ರಕಾರ ಈ ಜೋಡಿ ನವೆಂಬರ್ 10 ರಂದು ಗ್ರೀಸ್ನಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಳ್ಳಲು ಯೋಜನೆ ರೂಪಿಸಿದೆ ಎಂದು ಹೇಳಲಾಗುತ್ತಿದೆ.
ಅನಿರುದ್ಧ್ ಅವರ ಚಿಕ್ಕಪ್ಪ, ಹಿರಿಯ ನಟ ವೈ. ಜಿ. ಮಹೇಂದ್ರನ್ ಅವರು ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿ, ಮದುವೆ ಶೀಘ್ರದಲ್ಲೇ ನಡೆಯಲಿದೆ ಎಂದು ಸುಳಿವು ನೀಡಿದ್ದಾರೆ. ಇದರಿಂದ ಕಳೆದ ಕೆಲ ದಿನಗಳಿಂದ ಸೈಲೆಂಟ್ ಆಗಿದ್ದ ಮದುವೆ ವದಂತಿಗೆ ಮತ್ತೆ ಜೀವ ಬಂದಂತಾಗಿದೆ.
ಕಾವ್ಯ ಮಾರನ್ ಐಪಿಎಲ್ ಮೂಲಕ ದೇಶಾದ್ಯಂತ ಅಪಾರ ಜನಪ್ರಿಯತೆ ಗಳಿಸಿದ್ದಾರೆ. ಅವರು ಸನ್ ಟಿವಿ ಮಾಲೀಕ ಕಲಾನಿಧಿ ಮಾರನ್ ಅವರ ಪುತ್ರಿಯಾಗಿದ್ದಾರೆ.
ಅನಿರುದ್ಧ್ ಮತ್ತು ಕಾವ್ಯ ಮಾರನ್ ಪ್ರೀತಿಯಲ್ಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. ಈ ಹಿಂದೆ ಅನಿರುದ್ಧ್ ಈ ರೀತಿಯ ಸುದ್ದಿಗಳನ್ನು ನಿರಾಕರಿಸಿದ್ದರು. ಇಬ್ಬರ ಕಡೆಯಿಂದ ಯಾವುದೇ ಅಧಿಕೃತ ಸ್ಪಷ್ಟನೆ ಹೊರ ಬಿದ್ದಿಲ್ಲ.





Be the first to comment