ಒಟಿಟಿ ಬಿಡುಗಡೆಗೆ ಸಜ್ಜಾದ ‘ಜನ ನಾಯಗನ್’

ದಳಪತಿ ವಿಜಯ್ ಅಭಿನಯದ ಕೊನೆಯ ಸಿನಿಮಾ ‘ಜನ ನಾಯಗನ್’  ಆಗಸ್ಟ್ 21ರಿಂದ ಜೀ5 ಒಟಿಟಿಯಲ್ಲಿ ಪ್ರಸಾರವಾಗಲಿದೆ.

ಜೀ ತಮಿಳು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಎಐ ಟೀಸರ್ ಹಂಚಿಕೊಂಡು ಈ ವಿಷಯ ತಿಳಿಸಿದೆ. ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ನಂತರ ‘ಜನ ನಾಯಗನ್’  ಸಿನಿಮಾ ಡಿಜಿಟಲ್ ವೇದಿಕೆಗೆ ಹೆಜ್ಜೆ ಇಡುತ್ತಿದೆ. ವಿಜಯ್ ಅವರ ರಾಜಕೀಯ ಪ್ರವೇಶದ ಮುನ್ನ ಮೂಡಿಬಂದ ಕೊನೆಯ ಚಿತ್ರ ಇದಾದ ಹಿನ್ನೆಲೆಯಲ್ಲಿ ಕೋಟ್ಯಂತರ ಅಭಿಮಾನಿಗಳು ಒಟಿಟಿ ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿದ್ದಾರೆ.

ಹೆಚ್ ವಿನೋದ್ ನಿರ್ದೇಶನದ ಈ ಚಿತ್ರದಲ್ಲಿ ಪೂಜಾ ಹೆಗ್ಡೆ, ಬಾಬಿ ಡಿಯೋಲ್ ಮತ್ತು ಮಮಿತಾ ಬೈಜು ಮುಖ್ಯ ಭೂಮಿಕೆಯಲ್ಲಿದ್ದಾರೆ. ಗೌತಮ್ ವಾಸುದೇವ್ ಮೆನನ್, ಪ್ರಕಾಶ್ ರಾಜ್ ಹಾಗೂ ನರೇನ್ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಕಾನೂನು ಹೋರಾಟಗಳ ನಂತರ ‘ಜನ ನಾಯಗನ್’  ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ದೊರೆತಿತ್ತು. ಜುಲೈ 23ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದಿತ್ತು. ಪೂರ್ಣ ಪ್ರಮಾಣದ ರಾಜಕೀಯ ಜೀವನಕ್ಕೆ ಕಾಲಿಟ್ಟ ವಿಜಯ್ ಅವರಿಗೆ ಇದು  ಸಿನಿಮಾ ಆಗಿಲ್ಲ ಎಂಬ ಮಾತು ಕೇಳಿ ಬಂದಿದೆ. ಮನೆಯಲ್ಲಿ  ಕುಳಿತು ಸಿನಿಮಾ ನೋಡಲು ಬಯಸುವ ಅಭಿಮಾನಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!