ಸೂಪರ್ಸ್ಟಾರ್ ರಜನಿಕಾಂತ್ ಅವರ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾ ಬಿಡುಗಡೆಗೂ ಮುನ್ನವೇ ಒಟಿಟಿ ಡೀಲ್ನಲ್ಲಿ ಹೊಸ ದಾಖಲೆ ಬರೆದಿದೆ.
ವರದಿಗಳ ಪ್ರಕಾರ ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಡಿಜಿಟಲ್ ಹಕ್ಕುಗಳು 160 ಕೋಟಿ ರೂಪಾಯಿಗೆ ಪ್ರಮುಖ ಒಟಿಟಿ ಪ್ಲಾಟ್ಫಾರ್ಮ್ಗೆ ಮಾರಾಟವಾಗಿವೆ. ಇದು ತಮಿಳು ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ದುಬಾರಿ ಒಟಿಟಿ ಡೀಲ್ ಎನ್ನಲಾಗಿದೆ.
ರಜನಿಕಾಂತ್ ಅವರು ಮತ್ತೊಮ್ಮೆ ಟೈಗರ್ ಮುತ್ತುವೇಲ್ ಪಾಂಡಿಯನ್ ಎಂಬ ಐಕಾನಿಕ್ ಪಾತ್ರದ ಮೂಲಕ ಅಬ್ಬರಿಸಲಿದ್ದಾರೆ. ಚಿತ್ರತಂಡ ಅಕ್ಟೋಬರ್ ತಿಂಗಳಲ್ಲಿ ಸಿನಿಮಾವನ್ನು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆ ಮಾಡಲು ಯೋಜನೆ ರೂಪಿಸಿದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
‘ಸನ್ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ಕಲಾನಿಧಿ ಮಾರನ್ ಈ ಬಿಗ್ ಬಜೆಟ್ ಸಿನಿಮಾವನ್ನು ನಿರ್ಮಿಸುತ್ತಿದ್ದು, ಸಿನಿಮಾದ ಒಟಿಟಿ ಹೊಸ ದಾಖಲೆ ಅಭಿಮಾನಿಗಳಲ್ಲಿ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.
—–





Be the first to comment