ಪ್ರಸಿದ್ಧ ಗಾಯಕಿ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜೀವನ ಚರಿತ್ರೆ ಆಧಾರಿತ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಅವರನ್ನು ಪ್ರತಿಷ್ಠಿತ ಪಾತ್ರಕ್ಕೆ ಪರಿಗಣಿಸಲಾಗುತ್ತಿದೆ ಎಂದು ವರದಿಯಾಗಿದೆ.
ಮುಂದಿನ ತಿಂಗಳು ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ. ಈ ಪಾತ್ರಕ್ಕಾಗಿ ರಶ್ಮಿಕಾ ಮಂದಣ್ಣ ಅವರನ್ನು ಸಂಪರ್ಕಿಸಿದ್ದಾರೆ ಎಂದು ವರದಿಯಾಗಿದೆ. ಎಂ.ಎಸ್. ಸುಬ್ಬುಲಕ್ಷ್ಮಿ ಅವರಂತಹ ಮಹಾನ್ ಗಾಯಕಿಯ ಪಾತ್ರ ಮಾಡುವುದು ರಶ್ಮಿಕಾ ಅವರಿಗೆ ದೊಡ್ಡ ಸವಾಲಾಗಿದೆ. ಈ ಪಾತ್ರವನ್ನು ರಶ್ಮಿಕಾ ಯಶಸ್ವಿಯಾಗಿ ನಿರ್ವಹಿಸಿದರೆ ಅವರ ಸಿನಿ ಜೀವನಕ್ಕೆ ದೊಡ್ಡ ಮೈಲಿಗಲ್ಲಾಗಲಿದೆ.
ಸಾಯಿ ಪಲ್ಲವಿ ಅವರನ್ನು ಆರಂಭದಲ್ಲಿ ಈ ಪಾತ್ರಕ್ಕೆ ಪರಿಗಣಿಸಲಾಗಿತ್ತು. ಸಾಯಿ ಪಲ್ಲವಿ ಚಿತ್ರದ ಭಾಗವಾಗಲು ಉತ್ಸುಕರಾಗಿದ್ದರು. ಆದರೆ ”ರಾಮಾಯಣ”ದ ಎರಡೂ ಭಾಗಗಳಿಗೆ ಕಮಿಟ್ ಮೆಂಟ್ ಇರುವುದರಿಂದ ಮುಂದಿನ ವರ್ಷದವರೆಗೆ ಅವರಿಗೆ ಬಯೋಪಿಕ್ ಗಾಗಿ ಡೇಟ್ ಹೊಂದಿಸಿಕೊಳ್ಳಲು ಕಷ್ಟವಾಗುತ್ತಿದೆ.
ಭಾರತೀಯ ಶಾಸ್ತ್ರೀಯ ಸಂಗೀತ ಲೋಕದ ದಿಗ್ಗಜ ಗಾಯಕಿಯ ಪಾತ್ರವನ್ನು ತೆರೆಯ ಮೇಲೆ ತರಲು ಚಿತ್ರತಂಡ ಬಿರುಸಿನ ತಯಾರಿ ನಡೆಸಿದೆ. ಈ ಬಿಗ್ ಪ್ರಾಜೆಕ್ಟ್ ಕುರಿತು ಸೆಪ್ಟೆಂಬರ್ 16ರಂದು ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜನ್ಮದಿನದಂದು ಅಧಿಕೃತ ಘೋಷಣೆ ಹೊರ ಬೀಳಲಿದೆ.
—-





Be the first to comment