ಫೋರ್ಬ್ಸ್ ಇಂಡಿಯಾ-100 ಪಟ್ಟಿಯಲ್ಲಿ ರಿಷಬ್ ಶೆಟ್ಟಿ

ಫೋರ್ಬ್ಸ್ ಇಂಡಿಯಾ ಬಿಡುಗಡೆ ಮಾಡಿರುವ ದೇಶದ ಪ್ರಮುಖ 100 ಗಣ್ಯರ ಪಟ್ಟಿಯಲ್ಲಿ ಸ್ಯಾಂಡಲ್‌ವುಡ್ ನಟ, ನಿರ್ದೇಶಕ  ರಿಷಬ್ ಶೆಟ್ಟಿ ಸ್ಥಾನ ಪಡೆದಿದ್ದಾರೆ.

ಪ್ಯಾನ್-ಇಂಡಿಯಾ ಮಟ್ಟದಲ್ಲಿ ರಿಷಬ್ ಶೆಟ್ಟಿ ಅವರ ಸಿನಿಮಾಗಳು ಸೃಷ್ಟಿಸಿರುವ ಪ್ರಭಾವ ಹಾಗೂ ಅಭೂತಪೂರ್ವ ಯಶಸ್ಸು ಈ ಸಾಧನೆಗೆ ಪ್ರಮುಖ ಕಾರಣವಾಗಿದೆ.  ನಟ, ನಿರ್ದೇಶಕ ಹಾಗೂ ಬರಹಗಾರ ವಿಭಾಗಗಳಲ್ಲಿ ಆಯ್ಕೆಯಾದ ಏಕೈಕ ವ್ಯಕ್ತಿ ರಿಷಬ್ ಶೆಟ್ಟಿ ಎಂಬುದು  ಸ್ಯಾಂಡಲ್‌ವುಡ್‌ಗೆ ಹೆಮ್ಮೆಯ ವಿಚಾರವಾಗಿದೆ.

ಕನ್ನಡದ ಸ್ಥಳೀಯ ಕಥೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಗುಣಮಟ್ಟದ ಸಿನಿಮೀಯ ಅನುಭವವಾಗಿ ಕಟ್ಟಿಕೊಟ್ಟಿರುವ ರಿಷಬ್ ಶೆಟ್ಟಿ ಫೋರ್ಬ್ಸ್ ಇಂಡಿಯಾ- 100 ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವ ಮೂಲಕ ತಮ್ಮ ಪ್ರಭಾವವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಜನಪದ, ದೈವಾರಾಧನೆ ಹಾಗೂ ಪ್ರಕೃತಿ-ಮಾನವನ ನಡುವಿನ ಸಂಘರ್ಷವನ್ನು ಕೇಂದ್ರವಾಗಿಟ್ಟುಕೊಂಡು ರೂಪಿಸಲಾದ ‘ಕಾಂತಾರ’ ಸರಣಿ ಕನ್ನಡದ ಸಾಂಸ್ಕೃತಿಕ ಕಥನವನ್ನು ದೇಶ-ವಿದೇಶದ ಪ್ರೇಕ್ಷಕರಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ.

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ: ಎ ಲೆಜೆಂಡ್ ಚಾಪ್ಟರ್-1’ ಚಿತ್ರ ಅವರ ಪ್ಯಾನ್-ಇಂಡಿಯಾ ಪ್ರಭಾವವನ್ನು ಮತ್ತಷ್ಟು ಬಲಪಡಿಸಿತು.  ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಪೌರಾಣಿಕ ಪ್ರೀಕ್ವೆಲ್ ವಿಶ್ವಾದ್ಯಂತ ಭರ್ಜರಿ ಪ್ರದರ್ಶನ ಕಂಡು 800 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿದೆ.

—-

 

 

 

Be the first to comment

Leave a Reply

Your email address will not be published. Required fields are marked *

Translate »
error: Content is protected !!