‘ಟಾಕ್ಸಿಕ್’ ಇಂಗ್ಲಿಷ್ ಆವೃತ್ತಿ ಬಿಡುಗಡೆ

ಯಶ್ ನಟನೆಯ   ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಇಂಗ್ಲಿಷ್ ಆವೃತ್ತಿ  ಸೆಪ್ಟೆಂಬರ್ 4ರಂದು ಬಿಡುಗಡೆಯಾಗಿದೆ.

ಟಾಕ್ಸಿಕ್ ಚಿತ್ರದ ಇಂಗ್ಲಿಷ್ ಆವೃತ್ತಿಯು 2 ಗಂಟೆ 57 ನಿಮಿಷಗಳ ಅವಧಿಯನ್ನು ಹೊಂದಿರುತ್ತದೆ. ಕನ್ನಡದ ಥಿಯೇಟರ್ ಆವೃತ್ತಿ 3 ಗಂಟೆ 14 ನಿಮಿಷ 12 ಸೆಕೆಂಡುಗಳ ಅವಧಿಯನ್ನು ಹೊಂದಿದೆ. ಇಂಗ್ಲಿಷ್ ಆವೃತ್ತಿಗೆ 17 ನಿಮಿಷ ಕತ್ತರಿ ಬಿದ್ದಿದೆ.

‘Toxic: A Fairy Tale for Grown-Ups’- ಇಂಗ್ಲಿಷ್ ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಇದು ಭಾರತೀಯ ಇತರ ಭಾಷೆಗಳಿಗಿಂತ ಸಂಕ್ಷಿಪ್ತ ರೂಪವಾಗಿರುವ ಆವೃತ್ತಿಯಾಗಿದೆ. ಸೆಪ್ಟೆಂಬರ್ 4ರಿಂದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ’ ಎಂದು ಚಿತ್ರತಂಡ ತಿಳಿಸಿದೆ.

‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರಕ್ಕೆ ಗೀತು ಮೋಹನ್‌ದಾಸ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಪೋರ್ಚುಗೀಸರ ಆಳ್ವಿಕೆಯ ಕಾಲದಲ್ಲಿ ಗೋವಾದಲ್ಲಿ ಉನ್ನತ ಸ್ಥಾನಕ್ಕೇರುವ ‘ರಾಯ’ ಎಂಬ ಪಾತ್ರದಲ್ಲಿ ಯಶ್ ನಟಿಸಿದ್ದಾರೆ. ಚಿತ್ರದಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ತಾರಾ ಸುತಾರಿಯಾ ಮತ್ತು ಹುಮಾ ಖುರೇಷಿ ಸೇರಿದಂತೆ ಹಲವರು ನಟಿಸಿದ್ದಾರೆ. ಆಗಸ್ಟ್ 26ರಂದು ಚಿತ್ರ  ಇತರ ಭಾಷೆಗಳಲ್ಲಿ ಬಿಡುಗಡೆಯಾಗಿತ್ತು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!