ಮಾಲಾಶ್ರೀ – ರುಕ್ಮಿಣಿ ವಸಂತ್ ಕಾಂಬಿನೇಷನ್‌ನ ಚಿತ್ರ ‘ಮಂಗಳ ಗೌರಿ’

‘ಕನಸಿನ ರಾಣಿ’ ಮಾಲಾಶ್ರೀ ಹಾಗೂ ಬಹುಬೇಡಿಕೆಯ ನಟಿ ರುಕ್ಮಿಣಿ ವಸಂತ್ ಕಾಂಬಿನೇಷನ್‌ನ ಚಿತ್ರ ‘ಮಂಗಳ ಗೌರಿ’ ಘೋಷಣೆಯಾಗಿದೆ.

ಸ್ಯಾಂಡಲ್‌ವುಡ್‌ನ ಎರಡು ತಲೆಮಾರಿನ ಖ್ಯಾತ ನಟಿಯರನ್ನು ಒಂದೇ ಫ್ರೇಮ್‌ನಲ್ಲಿ ಒಗ್ಗೂಡಿಸಿರುವ ‘ಮಂಗಳ ಗೌರಿ’   ಚಿತ್ರದ ಚಿತ್ರೀಕರಣ ಸದ್ಯ ಭರದಿಂದ ಸಾಗುತ್ತಿದೆ. ರಾಹುಲ್ ಪಿಕೆ ನಿರ್ದೇಶನ ಮಾಡುತ್ತಿರುವ ಈ ಚಿತ್ರವನ್ನು ಪ್ರತಿಷ್ಠಿತ ಸಂಸ್ಥೆಗಳಾದ ‘ಕೆವಿಎನ್ ಪ್ರೊಡಕ್ಷನ್ಸ್’ ಮತ್ತು ‘ದಾಕ್ಷಾಯಣಿ ಟಾಕೀಸ್’ ಜಂಟಿಯಾಗಿ ನಿರ್ಮಿಸುತ್ತಿವೆ.

ಚಿತ್ರದಲ್ಲಿ ಮಾಲಾಶ್ರೀ ಅವರು ಇದುವರೆಗೂ ಕಂಡಿರದ ಹೊಚ್ಚ ಹೊಸ ಅವತಾರದಲ್ಲಿ ಪ್ರೇಕ್ಷಕರ ಎದುರು ಬರಲಿದ್ದು, ಇಂದಿನ ಯುವ ಪೀಳಿಗೆಯ ಪ್ರೇಕ್ಷಕರಿಗೆ ಅವರ ಹೊಸ ಆಯಾಮದ ನಟನಾ ಕೌಶಲ ಅನಾವರಣಗೊಳ್ಳಲಿದೆ.  ಸಹಜ ಅಭಿನಯದ ಮೂಲಕ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿರುವ ರುಕ್ಮಿಣಿ ವಸಂತ್, ಮಾಲಾಶ್ರೀ ಜೊತೆ ಸಮಬಲದ ಪಾತ್ರದಲ್ಲಿ ಮಿಂಚಲಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ’ ನಂತರ ಹೇಮಂತ್ ಎಂ. ರಾವ್ ಅವರೊಂದಿಗೆ ಹಾಗೂ ‘ಟಾಕ್ಸಿಕ್’ ಚಿತ್ರದ ನಂತರ ಕೆವಿಎನ್ ಪ್ರೊಡಕ್ಷನ್ಸ್ ಜೊತೆಗೆ ರುಕ್ಮಿಣಿ ವಸಂತ್ ಅವರ ಎರಡನೇ ಸಿನಿಮಾವಾಗಿದೆ.

ಚಿತ್ರಕ್ಕೆ ಮಿಧುನ್ ಮುಕುಂದನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ‘ತುಳಸಿ’ ಮ್ಯೂಸಿಕ್ ವಿಡಿಯೋ ಖ್ಯಾತಿಯ ಶ್ರೀವತ್ಸನ್ ಸೆಲ್ವರಾಜನ್ ಛಾಯಾಗ್ರಹಣ ನಿರ್ವಹಿಸುತ್ತಿದ್ದಾರೆ.  ಸಾಹಸ ನಿರ್ದೇಶಕ ವಿಕ್ರಮ್ ಮೋರ್ ಆ್ಯಕ್ಷನ್ ದೃಶ್ಯಗಳಿಗೆ ನಿರ್ದೇಶನ ಮಾಡುತ್ತಿದಾರೆ. ಸದ್ಯ ಶೂಟಿಂಗ್ ಮುಕ್ತಾಯದ ಹಂತಕ್ಕೆ ತಲುಪಿದ್ದು, ಚಿತ್ರತಂಡ ತೆರೆಗೆ ತರಲು ಸಿದ್ಧತೆ ನಡೆಸುತ್ತಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!