ಮೆಲ್ಬೋರ್ನ್ ಫಿಲಂ ಫೆಸ್ಟಿವಲ್‌ಗೆ ‘ಪುಟ್ಟಣ್ಣನ ಕತ್ತೆ’

ಸಿದ್ದು ಪೂರ್ಣಚಂದ್ರ ನಿರ್ದೇಶನದ ‘ಪುಟ್ಟಣ್ಣನ ಕತ್ತೆ’ ಚಿತ್ರ ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ನಡೆಯಲಿರುವ  ಸಿನಿಮೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ.

ಬೆಂಗಳೂರಿನಂಥ ನಗರಗಳಲ್ಲಿ ಕತ್ತೆ ಹಾಲು ಮಾರುವವರು ಆಗಾಗ ಕಾಣಿಸಿಕೊಳ್ಳುತ್ತಾರೆ.  ಹಳ್ಳಿಯೊಂದರಿಂದ   ಕತ್ತೆಯೊಂದಿಗೆ ಪಟ್ಟಣ ಸೇರಿಕೊಂಡವನ ಸುತ್ತ ಘಟಿಸುವ ಆಸಕ್ತಿದಾಯಕ ಕಥೆ ‘ಪುಟ್ಟಣ್ಣನ ಕತ್ತೆ’ ಸಿನಿಮಾದಲ್ಲಿದೆ.

ಪುಟ್ಟಣ್ಣನಾಗಿ ಭೀಮೇಶ್ ಗೌಡ ಕಾಣಿಸಿಕೊಂಡರೆ, ಅನೀಶ್ ಆರ್ಯನ್ ಸಿನಿಮಾದ ನಾಯಕನಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅನೀಶ್ ಆರ್ಯನ್, ಭೀಮೇಶ್ ಗೌಡ, ಎನ್.ಟಿ ರಾಮಸ್ವಾಮಿ, ಕವಿತಾ ಕಂಬಾರ್, ವಿಭಾ ಮುಂತಾದವರು ನಟಿಸಿದ್ದಾರೆ.

ಪೂರ್ಣಚಂದ್ರ ಫಿಲಂಸ್ ಬ್ಯಾನರಿನಡಿಯಲ್ಲಿ ತನ್ಮಯ್ ಎಸ್. ಗೌಡ ನಿರ್ಮಾಣ ಮಾಡಿರುವ ‘ಪುಟ್ಟಣ್ಣನ ಕತ್ತೆ’ ಚಿತ್ರ  ಸಿದ್ದು ಪೂರ್ಣಚಂದ್ರ ಕಥೆ ಚಿತ್ರಕಥೆ, ಸಂಭಾಷಣೆಯೊಂದಿಗೆ ನಿರ್ದೇಶನ ಮಾಡಿದ್ದಾರೆ.  ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ಅನಂತ್ ಆರ್ಯನ್ ಸಂಗೀತವಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!