ಬಹು ನಿರೀಕ್ಷಿತ ಸಸ್ಪೆನ್ಸ್ ಕ್ರೈಮ್ ಥ್ರಿಲ್ಲರ್ ಸಿನಿಮಾ ‘ರಾಜನಿವಾಸ’ದ ನಾಲ್ಕನೇ ಲಿರಿಕಲ್ ಹಾಡು ‘ಅಣ್ಣ ಯಾರು’ ಬಿಡುಗಡೆಯಾಗಿ ಸದ್ದು ಮಾಡುತ್ತಿದೆ.
ತಂಬೂರಿ ಫಿಲ್ಮ್ಸ್ ಅರ್ಪಿಸುವ, CANOPUS CINEMAS ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ‘ರಾಜನಿವಾಸ’ದ ನಾಲ್ಕನೇ ಲಿರಿಕಲ್ ಹಾಡು ಬಿಡುಗಡೆಯಾದ ಎರಡೇ ದಿನದಲ್ಲಿ 5 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ದಾಖಲೆ ಬರೆದಿದೆ. ಈ ಹಾಡಿಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಚಿತ್ರದಲ್ಲಿ ಕೃತಿಕಾ, ರಾಘವ್ ಹಾಗೂ ಶ್ರೀ ನಗರ ಕಿಟ್ಟಿ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ನಿರ್ಮಾಪಕ ದಾ.ಪಿ. ಆಂಜನಪ್ಪ ಹಾಗೂ ಸಹ ನಿರ್ಮಾಪಕ ಲೋಕೇಶ್ ಗೌಡ ಅವರ ನಿರ್ಮಾಣದಲ್ಲಿ, ಮಿಥುನ್ ಸುವರ್ಣ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ವಿಜಯ್ ಯಾರ್ಡ್ಲಿ ವಹಿಸಿದ್ದಾರೆ.
‘ರಾಜನಿವಾಸ’ ಸಿನಿಮಾ ನವೆಂಬರ್ 6 ರಂದು ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲಿದೆ.
—-





Be the first to comment