ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದ ನಟಿ ರಚಿತಾ ರಾಮ್ ನಿರಾಸೆಯಿಂದ ವಾಪಸ್ ತೆರಳಿದ್ದಾರೆ.
ದರ್ಶನ್ ಅವರನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ರಚಿತಾ ರಾಮ್ ಸುಮಾರು ಎರಡು ಗಂಟೆಗಳ ಕಾಲ ಜೈಲು ಆವರಣದಲ್ಲಿ ಕಾಯುತ್ತಿದ್ದರು. ಜೈಲು ನಿಯಮದಂತೆ ನಟಿ ಬಂದಿರುವ ವಿಚಾರವನ್ನು ಅಧಿಕಾರಿಗಳು ದರ್ಶನ್ ಅವರ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ. ಆದರೆ ಹೊರಗಿನಿಂದ ಯಾರೇ ಬಂದರೂ ಭೇಟಿಯಾಗುವುದಿಲ್ಲ ಎಂದು ದರ್ಶನ್ ಭೇಟಿ ನಿರಾಕರಿಸಿದ್ದಾರೆ ಎನ್ನಲಾಗಿದೆ.
ಹೀಗಾಗಿ ರಚಿತಾ ರಾಮ್ ಅವರಿಗೆ ಭೇಟಿಗೆ ಅವಕಾಶ ಸಿಗಲಿಲ್ಲ. ಜೈಲು ಮೂಲಗಳ ಪ್ರಕಾರ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಮಗ, ತಾಯಿ ಹಾಗೂ ಸಹೋದರ ದಿನಕರ್ ಅವರನ್ನು ಹೊರತುಪಡಿಸಿ ಇತರರನ್ನು ಭೇಟಿಯಾಗಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.
ಪ್ರಕರಣದಲ್ಲಿ ಪ್ರದೋಷ್ ಮಾಫಿ ಸಾಕ್ಷಿಯಾಗಿ ಹೇಳಿಕೆ ನೀಡಿದ ಬಳಿಕ ದರ್ಶನ್ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ರಚಿತಾ ರಾಮ್ ಭೇಟಿಗೆ ಅವಕಾಶ ಸಿಗದೆ ವಾಪಸ್ ತೆರಳಿರುವ ಘಟನೆ ಚಿತ್ರರಂಗ ಹಾಗೂ ದರ್ಶನ್ ಅಭಿಮಾನಿಗಳ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
—-





Be the first to comment