ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ: ಭಾಗ 1’ ಸಿನಿಮಾದ ವಿಶೇಷ ಪ್ರದರ್ಶನ ನವೆಂಬರ್ 5ರಂದು ರಾಷ್ಟ್ರಪತಿ ಭವನದಲ್ಲಿ ಆಯೋಜಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸಾಮಾನ್ಯವಾಗಿ ಪ್ರಮುಖ ಸಿನಿಮಾಗಳನ್ನು ರಾಜಕೀಯ ಗಣ್ಯರಿಗಾಗಿ ವಿಶೇಷವಾಗಿ ಪ್ರದರ್ಶಿಸಲಾಗುತ್ತದೆ. ‘ರಾಮಾಯಣ’ ಚಿತ್ರಕ್ಕೂ ಇಂತಹ ಪ್ರದರ್ಶನ ಆಯೋಜಿಸಲು ಅನುಮತಿ ಕೋರುವ ಪ್ರಕ್ರಿಯೆ ನಡೆಯುತ್ತಿದೆ ಎನ್ನಲಾಗಿದೆ. ಈ ಕುರಿತು ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ವಿಶೇಷ ಪ್ರದರ್ಶನ ನಡೆದರೆ ನಟರಾದ ರಣಬೀರ್ ಕಪೂರ್, ಯಶ್, ನಟಿ ಸಾಯಿ ಪಲ್ಲವಿ ಹಾಗೂ ನಿರ್ದೇಶಕ ನಿತೇಶ್ ತಿವಾರಿ ಭಾಗವಹಿಸುವ ನಿರೀಕ್ಷೆಯಿದೆ.
ಚಿತ್ರದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ, ಯಶ್ ರಾವಣನಾಗಿ, ಸಾಯಿ ಪಲ್ಲವಿ ಸೀತೆಯಾಗಿ, ರವಿ ದುಬೆ ಲಕ್ಷ್ಮಣನ ಪಾತ್ರದಲ್ಲಿ, ಸನ್ನಿ ಡಿಯೋಲ್ ಹನುಮಂತನ ಪಾತ್ರದಲ್ಲಿ ನಟಿಸಿದ್ದಾರೆ. ರಕುಲ್ ಪ್ರೀತ್ ಸಿಂಗ್, ಲಾರಾ ದತ್ತಾ, ವಿವೇಕ್ ಒಬೆರಾಯ್, ಶೀಬಾ ಚಡ್ಡಾ, ಅರುಣ್ ಗೋವಿಲ್ ಮತ್ತು ಇಂದಿರಾ ಕೃಷ್ಣನ್ ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿದ್ದಾರೆ.
‘ರಾಮಾಯಣ’ ಚಿತ್ರವನ್ನು ಎರಡು ಭಾಗಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ. ಮೊದಲ ಭಾಗ ನವೆಂಬರ್ 5ರಂದು ತೆರೆ ಕಾಣಲಿದೆ. ಎರಡನೇ ಭಾಗವು 2027ರ ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಹಿಂದಿ, ತಮಿಳು, ತೆಲುಗು, ಕನ್ನಡ, ಮಲಯಾಳಂ ಭಾಷೆಗಳಲ್ಲಿ ಚಿತ್ರ ಬಿಡುಗಡೆ ಮಾಡಲು ಯೋಜಿಸಲಾಗಿದೆ.
—





Be the first to comment