ಧನ್ವೀರ್ ವಿರುದ್ಧ ದರ್ಶನ್ ಆಪ್ತ ದೂರು

ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ನಟ ದರ್ಶನ್ ಅವರ ಆಪ್ತ ಸಹಾಯಕ  ನಾಗರಾಜ್, ಸ್ಯಾಂಡಲ್‌ವುಡ್ ನಟ ಧನ್ವೀರ್ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ನಾಗರಾಜ್ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಧನ್ವೀರ್ ವಿರುದ್ಧ ಎನ್‌ಸಿಆರ್  ದಾಖಲಿಸಿಕೊಂಡು ಪರಿಶೀಲನೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

ತಮ್ಮ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಮಾತನಾಡಿದ್ದಾರೆ ಎಂದು ನಾಗರಾಜ್ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದು ಬಂದಿದೆ. ದೂರನ್ನು ಸ್ವೀಕರಿಸಿರುವ ಪೊಲೀಸರು ಎನ್‌ಸಿಆರ್ ದಾಖಲಿಸಿ  ಘಟನೆಗೆ ಸಂಬಂಧಿಸಿದ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ಧನ್ವೀರ್ ವಿರುದ್ಧ ದರ್ಶನ್ ಅವರ ಆಪ್ತ ಸಹಾಯಕರೇ ದೂರು ನೀಡಿರುವುದು ಸ್ಯಾಂಡಲ್‌ವುಡ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ನಿಂದನೆ ನಡೆದಿದೆ ಎನ್ನಲಾದ ಸಂದರ್ಭ, ಘಟನೆಗೆ ಕಾರಣವಾದ ವಿಚಾರ ಹಾಗೂ ಇತರ ವಿವರಗಳು ಇನ್ನಷ್ಟೇ ಸ್ಪಷ್ಟವಾಗಬೇಕಿವೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!