ಪುನೀತ್ ಅಗಲಿ 5 ವರ್ಷ

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ ಇಂದಿಗೆ 5 ವರ್ಷಗಳು ಕಳೆದಿದ್ದು, ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಸ್ಮಾರಕಕ್ಕೆ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ  ಗೌರವ ನಮನ ಸಲ್ಲಿಸುತ್ತಿದ್ದಾರೆ.

ಅಪ್ಪು ಸ್ಮಾರಕವನ್ನು ವಿವಿಧ ರೀತಿಯ ಪುಷ್ಪಗಳಿಂದ ಅಲಂಕರಿಸಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಅಭಿಮಾನಿಗಳು ಆಗಮಿಸಿ ಅಪ್ಪು ನೆನಪಿನಲ್ಲಿ ನಮನ ಸಲ್ಲಿಸುತ್ತಿದ್ದಾರೆ. ಕುಟುಂಬಸ್ಥರು ಬೆಳಿಗ್ಗೆ ಸ್ಮಾರಕಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಅಪ್ಪು ಅವರ ನೆನಪಿನಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಅಭಿಮಾನಿಗಳು ರಕ್ತದಾನ ಶಿಬಿರ, ಅನ್ನಸಂತರ್ಪಣೆ, ಶಾಲಾ ಮಕ್ಕಳಿಗೆ ಅಗತ್ಯ ಸಾಮಗ್ರಿಗಳ ವಿತರಣೆ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಎಕ್ಸ್ ನಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ‘ಇಂದಿಗೂ ಕೋಟ್ಯಂತರ ಕನ್ನಡಿಗರ ಹೃದಯಗಳಲ್ಲಿ ಶಾಶ್ವತವಾಗಿ ನೆಲೆಸಿರುವವರು ಕರ್ನಾಟಕ ರತ್ನ ಡಾ. ಪುನೀತ್ ರಾಜ್‌ಕುಮಾರ್ ಅವರು. ಬಾಲನಟನಾಗಿ ರಾಷ್ಟ್ರಪ್ರಶಸ್ತಿ ಪಡೆದು, ನಾಯಕನಾಗಿ ಕನ್ನಡ ಚಿತ್ರರಂಗವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಅಪ್ಪು ಅವರ ಕಲಾ ಪ್ರತಿಭೆ ಅದ್ವಿತೀಯ. ತೆರೆಯ ಮೇಲೆ ಸೂಪರ್‌ಸ್ಟಾರ್ ಆಗಿದ್ದರೂ, ತೆರೆಯ ಹಿಂದೆ ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿ ಅವರು ಬದುಕಿದ ರೀತಿ ಎಲ್ಲರಿಗೂ ಮಾದರಿ’ ಎಂದಿದ್ದಾರೆ.

2021ರ ಅಕ್ಟೋಬರ್ 29ರಂದು ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ನಿಧನ  ಅಭಿಮಾನಿಗಳನ್ನು ಶೋಕಸಾಗರದಲ್ಲಿ ಮುಳುಗಿಸಿತ್ತು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!