‘ರಾಮಾಯಣ’ಕ್ಕೆ ಅಭಿಮಾನಿಗಳು ಫಿದಾ

ರಣಬೀರ್ ಕಪೂರ್ ಮತ್ತು ಯಶ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಪೌರಾಣಿಕ ಸಿನಿಮಾ ‘ರಾಮಾಯಣ’ ಇಂದು ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಚಿತ್ರಮಂದಿರಗಳ ಮುಂದೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ಬೆಂಗಳೂರಿನ ಗಾಂಧಿನಗರದ ಸಂತೋಷ್ ಚಿತ್ರಮಂದಿರದಲ್ಲಿ ಬೆಳಗ್ಗೆ 6 ಗಂಟೆಯಿಂದ ಮೊದಲ ಪ್ರದರ್ಶನ ಆರಂಭವಾಗಿದೆ. ನೆಚ್ಚಿನ ನಟ ಯಶ್ ಸಿನಿಮಾ ನೋಡಲು ಅಭಿಮಾನಿಗಳು ಮುಂಜಾನೆಯಿಂದ  ಥಿಯೇಟರ್ ಮುಂದೆ ಜಮಾಯಿಸಿದ್ದಾರೆ.

ಥಿಯೇಟರ್ ಆವರಣದಲ್ಲಿ ಯಶ್ ಅವರ ಬೃಹತ್ ಕಟೌಟ್ ಅಳವಡಿಸಲಾಗಿದೆ. ಅಭಿಮಾನಿಗಳು ಕಟೌಟ್‌ಗೆ ಆರತಿ ಎತ್ತಿ,  ಕುಂಬಳಕಾಯಿ ಒಡೆದು ಸಂಭ್ರಮಿಸಿದ್ದಾರೆ. ಪಟಾಕಿ ಸಿಡಿಸಿ, ಡೊಳ್ಳು ಕುಣಿತದೊಂದಿಗೆ ಜೈಕಾರ ಕೂಗಿದ್ದಾರೆ.

4,000 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣವಾದ ‘ರಾಮಾಯಣ’ ಸಿನಿಮಾ ವಿಶ್ವದಾದ್ಯಂತ 50 ಸಾವಿರಕ್ಕೂ ಹೆಚ್ಚು ಪರದೆಗಳಲ್ಲಿ ಬಿಡುಗಡೆಯಾಗಿದೆ. ಭಾರತದಲ್ಲಿ ಸುಮಾರು 9 ಸಾವಿರ ಸ್ಕ್ರೀನ್‌ಗಳಲ್ಲಿ ಪ್ರದರ್ಶನ ಕಾಣುತ್ತಿದ್ದು, ಕರ್ನಾಟಕದಲ್ಲಿ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆ ಕಂಡಿದೆ. ಬಿಡುಗಡೆಯ ಮುನ್ನ ಸಿನಿಮಾ ಮುಂಗಡ ಟಿಕೆಟ್ ಬುಕಿಂಗ್‌ನಿಂದ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

ಚಿತ್ರದಲ್ಲಿ  ಶ್ರೀರಾಮನಾಗಿ ರಣಬೀರ್ ಕಪೂರ್ ಕಾಣಿಸಿಕೊಂಡಿದ್ದಾರೆ. ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ಅಭಿನಯಿಸಿದ್ದಾರೆ.  ರಾವಣನಾಗಿ ಯಶ್ ಕಾಣಿಸಿಕೊಂಡಿದ್ದಾರೆ. ಯಶ್ ಅವರ ಖಡಕ್ ಲುಕ್ ಮತ್ತು ಸ್ಕ್ರೀನ್ ಪ್ರೆಸೆನ್ಸ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!