‘ರಾಮಾಯಣ’ ಪೈರಸಿಗೆ ಜೈಲು ಶಿಕ್ಷೆ

‘ರಾಮಾಯಣ’  ಸಿನಿಮಾ ದೃಶ್ಯಗಳನ್ನು ಚಿತ್ರೀಕರಿಸಿ ಹಂಚಿಕೊಳ್ಳುವವರಿಗೆ ಚಿತ್ರತಂಡ  ಕ್ರಿಮಿನಲ್ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿದೆ.

ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ಚಿತ್ರಮಂದಿರಗಳಲ್ಲಿ ಕೆಲವರು ಮೊಬೈಲ್ ಮೂಲಕ ದೃಶ್ಯಗಳನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳು ಹಾಗೂ ಮೆಸೇಜಿಂಗ್ ಆ್ಯಪ್‌ಗಳಲ್ಲಿ ಹಂಚಿಕೊಳ್ಳುತ್ತಿರುವುದು ಚಿತ್ರತಂಡದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ‘ರಾಮಾಯಣ’ ಚಿತ್ರತಂಡ ತನ್ನ ಅಧಿಕೃತ ಸಾಮಾಜಿಕ ಜಾಲತಾಣದ ಮೂಲಕ ಕಾನೂನು ನೋಟಿಸ್ ನೀಡಿದೆ.

ಚಿತ್ರಮಂದಿರಗಳಲ್ಲಿ ಸಿನಿಮಾದ ದೃಶ್ಯಗಳನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವವರ ವಿರುದ್ಧ  ದಂಡ ಮತ್ತು ಜೈಲು ಶಿಕ್ಷೆ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಬಹುದು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಸಿನಿಮಾದ ಯಾವುದೇ ಭಾಗವನ್ನು ಅನುಮತಿಯಿಲ್ಲದೆ ರೆಕಾರ್ಡ್ ಮಾಡಿ ಪ್ರಸಾರ ಮಾಡುವುದನ್ನು ನ್ಯಾಯಾಲಯ ನಿಷೇಧಿಸಿದೆ ಎಂದು ಚಿತ್ರತಂಡ ತಿಳಿಸಿದೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿದರೆ ನ್ಯಾಯಾಂಗ ನಿಂದನೆಯ ಕ್ರಮವನ್ನೂ ಎದುರಿಸಬೇಕಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ನವೆಂಬರ್ 5ರಂದು ಬಿಡುಗಡೆಯಾದ ನಿತೇಶ್ ತಿವಾರಿ ನಿರ್ದೇಶನದ  ಬಿಗ್ ಬಜೆಟ್ ಸಿನಿಮಾ ‘ರಾಮಾಯಣ’  ದಲ್ಲಿ ರಣಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!