ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ವಿಶ್ವದಾದ್ಯಂತ 1,000 ಕೋಟಿ  ಕಲೆಕ್ಷನ್ ಮಾಡಿದೆ. ವಿಶ್ವದಾದ್ಯಂತ ಗಳಿಸಿದ ಒಟ್ಟು ಮೊತ್ತದಲ್ಲಿ ಕರ್ನಾಟಕದ ಪಾಲು ಶೇ.10ರಷ್ಟಿದೆ. ವಿಶ್ವದಾದ್ಯಂತ  1000 ಕೋಟಿ  ಗಳಿಸಿದ ಯಶ್ ಅವರ ಎರಡನೇ ಚಿತ್ರ ಎಂಬ ಹೆಗ್ಗಳಿಕೆಗೆ ‘ರಾಮಾಯಣ’ ಪಾತ್ರವಾಗಿದೆ. ಕರ್ನಾಟಕದಲ್ಲಿ  100 ಕೋಟಿ ಗ್ರಾಸ್ ಗಳಿಸಿದ ಅವರ ಮೂರನೇ ಚಿತ್ರ ಎಂಬ ದಾಖಲೆಗೂ ಈ ಸಿನಿಮಾ ಸಾಕ್ಷಿಯಾಗಿದೆ.

ಈ ಹಿಂದೆ ‘ಕೆಜಿಎಫ್-2’ ಮೂಲಕ ಜಾಗತಿಕ ಮಟ್ಟದಲ್ಲಿ ಕನ್ನಡ ಚಿತ್ರರಂಗದ ಶಕ್ತಿಯನ್ನು ತೋರಿಸಿದ್ದ ಯಶ್,   ‘ರಾಮಾಯಣ’ದ ಮೂಲಕ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.  ‘ರಾಮಾಯಣ’ ಬ್ರಿಟನ್ ಮಾರುಕಟ್ಟೆಯಲ್ಲಿ ‘ಗಾಡ್ಜಿಲ್ಲಾ’ ಚಿತ್ರವನ್ನು ಹಿಂದಿಕ್ಕಿ ನಂಬರ್ ಒನ್ ಸ್ಥಾನಕ್ಕೇರಿದೆ. ವಿಶ್ವದ ವಿವಿಧ ಭಾಗಗಳಲ್ಲಿ ಯಶ್ ಅವರ ಅಭಿನಯಕ್ಕೆ ಉತ್ತಮ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಅವರ ಪಾತ್ರ ನಿರ್ವಹಣೆ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.

‘ರಾಮಾಯಣ’ ಚಿತ್ರದಲ್ಲಿ ರಣಬೀರ್ ಕಪೂರ್, ಸಾಯಿ ಪಲ್ಲವಿ, ಯಶ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಅವರ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಾಣದಲ್ಲಿ ಚಿತ್ರ ಮೂಡಿಬಂದಿದೆ.

—-