ಒಟಿಟಿಗೆ ‘ಪ್ರೇಮದ ಊರಲಿ’

ಬೆಳ್ಳಿಪರದೆಯ ಮೇಲೆ ಲಕ್ಷಾಂತರ ಅಭಿಮಾನಿಗಳನ್ನು ರಂಜಿಸಿದ ಕನ್ನಡದ  ರೊಮ್ಯಾಂಟಿಕ್ ಡ್ರಾಮಾ ಸಿನಿಮಾ ‘ಪ್ರೇಮದ ಊರಲಿ’  ನವೆಂಬರ್ 17ರಿಂದ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

ಪ್ರೇಮ, ಸಂಬಂಧಗಳ ಸುತ್ತ ಹೆಣೆದಿರುವ ‘ಪ್ರೇಮದ ಊರಲಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಈ ಸಿನಿಮಾ 150ಕೋಟಿಗೂ ಅಧಿಕ ಗಳಿಕೆ ಕಂಡಿತ್ತು. ಇದೀಗ ಸಿನಿಮಾ ಒಟಿಟಿ ಅಂಗಳಕ್ಕೆ ಲಗ್ಗೆ ಇಟ್ಟಿದೆ. ಚಿತ್ರದ ಡಿಜಿಟಲ್ ಹಕ್ಕುಗಳನ್ನು ಜಾಗತಿಕ ಮಟ್ಟದ ಮುಂಚೂಣಿ ಒಟಿಟಿ ಸಂಸ್ಥೆಯಾದ ಪ್ರೈಮ್ ವಿಡಿಯೋ ಅತ್ಯುತ್ತಮ ಮೊತ್ತಕ್ಕೆ ಪಡೆದುಕೊಂಡಿದೆ.

ಚಿತ್ರಮಂದಿರಗಳಲ್ಲಿ 50 ದಿನ ಯಶಸ್ವಿ ಪ್ರದರ್ಶನ ಪೂರೈಸಿ ಫ್ಯಾಮಿಲಿ ಎಂಟರ್‌ಟೈನರ್ ಆಗಿ ಹೊರಹೊಮ್ಮಿದ ಈ ಚಿತ್ರವನ್ನು ಚಿತ್ರಮಂದಿರಗಳಲ್ಲಿ ಸಿನಿಮಾ ವೀಕ್ಷಿಸಲು ಸಾಧ್ಯವಾಗದವರು ಮನೆಯಲ್ಲೇ ಕುಳಿತು ವೀಕ್ಷಿಸುವ ಅವಕಾಶ ಸಿಕ್ಕಿದೆ.

ಮನೋಜ್ ಕುಮಾರ್ ನಿರ್ದೇಶನದ ‘ಪ್ರೇಮದ ಊರಲಿ’ ಚಿತ್ರದಲ್ಲಿ ಶ್ರೀ ರಾಮ್, ತಪಸ್ವಿನಿ ಪೂಣಚ್ಚ, ರಾಮಿಕಾ ಶಿವು, , ಹಿರಿಯ ನಟ ರಂಗಾಯಣ ರಘು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸರಳ ಕಥೆ ಮತ್ತು ಭಾವನಾತ್ಮಕ ಸನ್ನಿವೇಶಗಳ ಮೂಲಕ ಸಿನಿಮಾ ಪ್ರೇಕ್ಷಕರ ಮನ ಗೆದ್ದಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!