ಶಂಕರಾಭರಣ

ಶಂಕರಾಭರಣಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸಪೋರ್ಟ್!

ಕನ್ನಡದ ವಿಭಿನ್ನ ಪ್ರಯತ್ನದ ಸಿನಿಮಾ ‘ಶಂಕರಾಭರಣ’ ಸಿನಿಮಾಗೀಗ ಸ್ಟಾರ್‌ಗಳ ಮೆಚ್ಚುಗೆ ಸಿಗುತ್ತಿದೆ. ಚಿತ್ರದ ಟ್ರೈಲರ್ ವೀಕ್ಷಿಸಿ ಕಿಚ್ಚ ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಇದೀಗ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೂಡ ಟ್ವೀಟ್ ಮಾಡುವ ಮೂಲಕ ಶಂಕರಾಭರಣ ಸಿನಿಮಾಗೆ ಬೆಂಬಲ ಸೂಚಿಸಿದ್ದಾರೆ.

ರಿಷಬ್ ಶೆಟ್ಟಿ ಅವರ ಟ್ವೀಟ್ ಚಿತ್ರತಂಡಕ್ಕೆ ಮತ್ತಷ್ಟು ಹುರುಪು ನೀಡಿದೆ. ಕನ್ನಡ ಚಿತ್ರರಂಗದ ಪ್ರಮುಖ ನಟರಿಂದ ಸಿಗುತ್ತಿರುವ ಈ ಬೆಂಬಲ ಸಿನಿಮಾ ಮೇಲಿನ ಗಮನವನ್ನು ಹೆಚ್ಚಿಸಿದೆ.

ನಟ ಶೈನ್ ಶೆಟ್ಟಿ ನಾಯಕನಾಗಿ ನಟಿಸುವುದರ ಜೊತೆಗೆ ಚಿತ್ರದ ಕಥೆಯನ್ನೂ ಬರೆದಿದ್ದಾರೆ. ಬಸ್ ಚಾಲಕನ ಸುತ್ತ ಸಾಗುವ ಹಾರರ್ ಕಾಮಿಡಿ ಕಥಾಹಂದರವನ್ನು ಸಿನಿಮಾ ಒಳಗೊಂಡಿದೆ. ಬಸ್ ಕೂಡ ಚಿತ್ರದ ಕಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಚಿತ್ರದಲ್ಲಿ ಶೈನ್ ಶೆಟ್ಟಿ ನಾಯಕನಾಗಿ ಕಾಣಿಸಿಕೊಂಡಿದ್ದು, ತನ್ವಿ ರಾಮ್ ನಾಯಕಿಯಾಗಿ ನಟಿಸಿದ್ದಾರೆ. ಕೃತಿ ಬಿ. ಶೆಟ್ಟಿ, ಸಂಪತ್ ರಾಜ್, ದೀಪಕ್ ರೈ ಪಣಜೆ, ಮೈಮ್ ರಾಮದಾಸ್, ಅನಿಲ್ ಕುಮಾರ್ ಎ, ಉಮೇಶ್ ಶ್ರೀಕಾಂತ್ ತೆಲಿ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

‘ಮಿಥ್ಯ’ ಸಿನಿಮಾ ಖ್ಯಾತಿಯ ಸುಮಂತ್ ಭಟ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದು, ಉದಿತ್ ಖುರಾನಾ ಛಾಯಾಗ್ರಹಣ, ಭುವನೇಶ್ ಮಣಿವಣ್ಣನ್ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ರಂಗಸ್ಥಳ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಶ್ರೀಶೈಲ, ದಿವಾಕರ್ ಶೆಟ್ಟಿ ಮತ್ತು ಶೈನ್ ಶೆಟ್ಟಿ ಚಿತ್ರವನ್ನು ನಿರ್ಮಿಸಿದ್ದಾರೆ.

ನವೆಂಬರ್ 20ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ಶಂಕರಾಭರಣ ಸಿನಿಮಾ ವಿಭಿನ್ನ ಕಥಾಹಂದರ ಮತ್ತು ತಾಂತ್ರಿಕ ಪ್ರಯತ್ನಗಳಿಂದ ಗಮನ ಸೆಳೆಯುತ್ತಿದೆ. ಇದೀಗ ಕಿಚ್ಚ ಸುದೀಪ್ ಮತ್ತು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರ ಬೆಂಬಲ ಚಿತ್ರತಂಡದ ಸಂಭ್ರಮವನ್ನು ಹೆಚ್ಚಿಸಿದೆ.

ಶಂಕರಾಭರಣ

Be the first to comment

Leave a Reply

Your email address will not be published. Required fields are marked *

Translate »
error: Content is protected !!