ಬಾಲಿವುಡ್ ನಟ ಶಾರುಖ್ ಖಾನ್ ವಿರುದ್ಧ ಸುಳ್ಳು ಮಾಹಿತಿ ಹರಡಿದ್ದಾರೆ ಎಂಬ ಆರೋಪದ ಮೇಲೆ ಇನ್‌ಫ್ಲುಯೆನ್ಸರ್ ಒಬ್ಬರಿಗೆ ಮಾನನಷ್ಟ ನೋಟಿಸ್ ಕಳುಹಿಸಲಾಗಿದೆ.
ಇತ್ತೀಚೆಗೆ ಸದ್ಗುರು ಅವರ ಕಾರ್ಯಕ್ರಮದಲ್ಲಿ ಶಾರುಖ್ ಖಾನ್ ಭಾಗವಹಿಸಿದ್ದರು. ಈ ವೇಳೆ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಜೊತೆ ಶಾರುಖ್ ಮಾತನಾಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಅನಂತ್ ಅಂಬಾನಿ, ಶಾರುಖ್ ಖಾನ್ ಅವರಿಗೆ ಸುಮ್ಮನಿರುವಂತೆ ಸೂಚಿಸಿದ್ದಾರೆ ಎಂಬ ಅರ್ಥ ಬರುವಂತೆ ಇನ್‌ಫ್ಲುಯೆನ್ಸರ್ ಸುವಿಜ್ಞಾ ಶರ್ಮಾ ಅವರು ಬರೆದಿದ್ದರು ಎನ್ನಲಾಗಿದೆ.
ಸಂಭಾಷಣೆಯ ಸಂದರ್ಭವನ್ನು ತಪ್ಪಾಗಿ ಬಿಂಬಿಸಿ ಶಾರುಖ್ ಅವರ ಘನತೆಗೆ ಧಕ್ಕೆ ತರಲು ಪ್ರಯತ್ನಿಸಲಾಗಿದೆ ಎಂದು ಭಾರತೀಯ ನ್ಯಾಯ ಸಂಹಿತೆ 2023ರ ಸೆಕ್ಷನ್ 356ರ ಅಡಿಯಲ್ಲಿ ಮಾನನಷ್ಟ ನೋಟಿಸ್ ಕಳುಹಿಸಲಾಗಿದೆ. ನೋಟಿಸ್ ತಲುಪಿದ 48 ಗಂಟೆಗಳ ಒಳಗೆ ಐದು ಷರತ್ತುಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.
ವಿವಾದಿತ ಇನ್‌ಸ್ಟಾಗ್ರಾಮ್ ರೀಲ್ ಅಳಿಸಬೇಕು. ತಪ್ಪು ಕ್ಯಾಪ್ಶನ್ ಮತ್ತು ಹೇಳಿಕೆಗಳನ್ನು ತೆಗೆದುಹಾಕಬೇಕು. ಇಂತಹ ಮಾಹಿತಿಯನ್ನು ಮತ್ತೆ ಹಂಚಿಕೊಳ್ಳಬಾರದು. ಜೊ ಮೂಲ ವಿಡಿಯೋ ಹಾಗೂ ಸಂಬಂಧಿಸಿದ ದಾಖಲೆಗಳನ್ನು ಸುರಕ್ಷಿತವಾಗಿ ಇಟ್ಟುಕೊಂಡು ಕ್ರಮ ಕೈಗೊಂಡಿರುವ ಬಗ್ಗೆ ಲಿಖಿತ ದೃಢೀಕರಣ ನೀಡಬೇಕು ಎಂದು ನೋಟಿಸ್ ಕಳುಹಿಸಲಾಗಿದೆ.
ಯಾವುದೇ ಪುರಾವೆಗಳಿಲ್ಲದೆ ವ್ಯಕ್ತಿಯ ಘನತೆಗೆ ಧಕ್ಕೆ ತರುವ ಹೇಳಿಕೆಗಳನ್ನು ಹರಡುವುದರ ವಿರುದ್ಧ ನೋಟಿಸ್‌ನಲ್ಲಿ ಎಚ್ಚರಿಕೆ ನೀಡಲಾಗಿದೆ.
—-





Be the first to comment