‘ಕಿಲಾಡಿ ಪೊಲೀಸ್’ ಸದ್ಯದಲ್ಲೇ ತೆರೆಗೆ

ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸಿ, ಸಿನಿರಸಿಕರ ಮೆಚ್ಚುಗೆಗೆ ಪಾತ್ರರಾಗಿರುವ ನಟ ಹರೀಶ್‍ರಾಜ್ ಕೆಲವು ದಿನಗಳ ನಂತರ ‘ಕಿಲಾಡಿ ಪೊಲೀಸ್` ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಇತ್ತೀಚೆಗೆ ಖ್ಯಾತ ನಟ ಮೋಹನ್‍ಲಾಲ್ ಪುತ್ರ ನಾಯಕಾನಾಗಿ ನಟಿಸಿರುವ ಚಿತ್ರ ಸೇರಿದಂತೆ ಮಲೆಯಾಳಂನ ಎರಡು ಚಿತ್ರಗಳಲ್ಲಿ ಮುಖ್ಯ ಖಳನಟನ ಪಾತ್ರದಲ್ಲಿ ಹರೀಶ್ ರಾಜ್ ಕಾಣಿಸಿಕೊಂಡಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ `ಆರೆಂಜ್` ಚಿತ್ರದ ನಂತರ `ಕಿಲಾಡಿ ಪೊಲೀಸ್ ‘  ಚಿತ್ರದಲ್ಲಿ ಅಭಿನಯಿಸಿರುವ ಹರೀಶ್‍ರಾಜ್ ಈ ಚಿತ್ರದ ನಿರ್ದೇಶಕರೂ ಹೌದು.

ಹೆಚ್.ಆರ್ ಪ್ರೋಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ 40ದಿನಗಳ ಚಿತ್ರೀಕರಣ ನಡೆದಿದೆ.
ಅಪ್ಪ-ಮಗನ ಭಾಂದವ್ಯ, ಹಾಸ್ಯ, ಸುಮಧುರ ಹಾಡುಗಳು ಹಾಗೂ ಮೈಜುಂ ಎನಿಸುವ ಸಾಹಸ ಸನ್ನಿವೇಶಗಳು `ಕಿಲಾಡಿ  ಪೊಲೀಸ್ ‘  ಚಿತ್ರದಲ್ಲಿದೆ ಎನ್ನುತ್ತಾರೆ ನಿರ್ದೇಶಕ ಹರೀಶ್‍ರಾಜ್.

ಎಲ್ವಿನ್ ಜೋಶ್ವ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ದೀಪಕ್ ಕುಮಾರ್ ಅವರ ಛಾಯಾಗ್ರಹಣವಿದೆ. ಸುರೇಶ್-ಜೀವನ್ ಸಂಕಲನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ವಿ.ಮನೋಹರ್, ಸಂತೋಷ್ ನಾಯಕ್ ಹಾಗೂ ಹರೀಶ್ ರಾಜ್ ಬರೆದಿದ್ದಾರೆ.

ಹರೀಶ್‍ರಾಜ್ ಅವರಿಗೆ ನಾಯಕಿಯಾಗಿ ಸಾನ್ವಿ ಪೆನ್ನ್   ನಟಿಸಿದ್ದಾರೆ. ಶ್ರೀನಿವಾಸಮೂರ್ತಿ, ಪದ್ಮಾವಾಸಂತಿ, ಸುಚೇಂದ್ರ ಪ್ರಸಾದ್, ಶೋಭರಾಜ್, ಗಿರಿ, ಮುನಿ, ಮೋಹನ್ ಜುನೇಜ, ರಮೇಶ್ ಪಂಡಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

This Article Has 1 Comment
  1. Pingback: auto body shop greensboro nc

Leave a Reply

Your email address will not be published. Required fields are marked *

Translate »
error: Content is protected !!