ಈ ವಾರ ತೆರೆಗೆ ‘ಬ್ರಹ್ಮಚಾರಿ’

ನೀನಾಸಂ ಸತೀಶ್ ನಾಯಕರಾಗಿ ನಟಿಸಿರುವ ‘ಬ್ರಹ್ಮಾಚಾರಿ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಯು ಕೆ ಮೆಹ್ತ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತ ಅವರು ನಿರ್ಮಿಸಿರುವ ಈ ಚಿತ್ರವನ್ನು ಚಂದ್ರಮೋಹನ್ ನಿರ್ದೇಶಿಸಿದ್ದಾರೆ. ಈ ಹಿಂದೆ ‘ಡಬ್ಬಲ್ ಇಂಜಿನ್’ ಹಾಗೂ ಬಾಂಬೆ ಮಿಠಾಯಿ ‘ಚಿತ್ರಗಳನ್ನು ಚಂದ್ರಮೋಹನ್ ನಿರ್ದೇಶಿಸಿದ್ದಾರೆ. ಕಾಮಿಡಿ ಹಾಗೂ ಕೌಟುಂಬಿಕ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.
ರವಿಕುಮಾರ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಧರ್ಮವಿಶ್ ಸಂಗೀತ ನೀಡಿದ್ದಾರೆ. ಅರ್ಜುನ್ ಕಿಟ್ಟು ಸಂಕಲನ, ಮುರಳಿ ನೃತ್ಯ ನಿರ್ದೇಶನ ಹಾಗೂ ಹೊಸ್ಮನೆ ಮೂರ್ತಿ, ಪ್ರಕಾಶ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ನೀನಾಸಂ ಸತೀಶ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ. ಶಿವರಾಜ್ ಕೆ.ಆರ್.ಪೇಟೆ, ಅಶೋಕ್, ಅಕ್ಷತ, ಅಚ್ಯುತಕುಮಾರ್, ಪದ್ಮಜಾರಾವ್, ದತ್ತಣ್ಣ ಮುಂತಾದವರು ಈ ಚಿತ್ರದ ತಾರಾಬಳಗದ ಜೊತೆಗೆ `ಮಜಾಭಾರತ`ದಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದ ನೂತನ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!