ಶಿವಾರ್ಜುನ’ ಚಿತ್ರಕ್ಕೆ ಸಾಧುಕೋಕಿಲ ಹಿನ್ನೆಲ್ಲೆ ಸಂಗೀತ

ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಎಂ.ಬಿ.ಮಂಜುಳಾ ಶಿವಾರ್ಜುನ್ ಅವರು ನಿರ್ಮಿಸಿರುವ, ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸಿರುವ `ಶಿವಾರ್ಜುನ` ಚಿತ್ರಕ್ಕೆ ಸಾಧುಕೋಕಿಲ ಹಿನ್ನೆಲ್ಲೆ ಸಂಗೀತ ನೀಡಿದ್ದಾರೆ. ಸುರಾಗ್ ಅವರು ಚಿತ್ರದ ಸಂಗೀತ ನಿರ್ದೇಶಕರಾಗಿದ್ದು, ಹಿನ್ನಲ್ಲೆ ಸಂಗೀತವನ್ನು ಸಾಧುಕೋಕಿಲ ನೀಡಿದ್ದಾರೆ. ಈಗಾಗಲ್ಲೇ ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳು ಪೂರ್ಣಗೊಂಡಿದ್ದು, ಸದ್ಯದಲ್ಲೇ ಚಿತ್ರ ಸೆನ್ಸಾರ್ ಮುಂದೆ ಹೋಗಲಿದೆ.

ಶಿವತೇಜಸ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಹೆಚ್.ಸಿ.ವೇಣು ಅವರ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ವಿನೋದ್, ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಯೋಗರಾಜ್ ಭಟ್, ಕವಿರಾಜ್ ಹಾಗೂ ಡಾ||ವಿ.ನಾಗೇಂದ್ರಪ್ರಸಾದ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.
ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಅಮೃತ, ಅಕ್ಷತ, ತಾರಾ, ಅವಿನಾಶ್, ಕಿಶೋರ್, ಕುರಿ ಪ್ರತಾಪ್, ದಿನೇಶ್ ಮಂಗಳೂರು, ಸಾಧುಕೋಕಿಲ, ರವಿ ಕಿಶನ್, ತರಂಗ ವಿಶ್ವ, ಕೆ.ಆರ್.ಪೇಟೆ ಶಿವರಾಜ್, ನಯನ ಮುಂತಾದವರಿದ್ದಾರೆ.

This Article Has 2 Comments
  1. Pingback: Devops Solutions

  2. Pingback: 메이저토토

Leave a Reply

Your email address will not be published. Required fields are marked *

Translate »
error: Content is protected !!