ನವದೆಹಲಿ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಗೆ ಇದೇ 29ರಂದು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಗುವುದು ಎಂದು ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕಾರದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ 29ರಂದು ರಾಷ್ಟ್ರಪತಿ ಭವನದಲ್ಲಿ ಅಮಿತಾಬ್ ಗೆ ದಾದಾ ಸಾಹೇಬ ಪ್ರಶಸ್ತಿ ನೀಡಲಾಗುವುದು.
ಅನಾರೋಗ್ಯದಿಂದಾಗಿ ಅಮಿತಾಬ್ ಸೋಮವಾರ ರಾಷ್ಟ್ರೀಯ ಚಲನಚಿತ್ರ ಪಶಸ್ತಿ ಪುರಸ್ಕಾರದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಈ ನಿಟ್ಟಿನಲ್ಲಿ ಭಾನುವಾರ ನೀಡಲಾಗುವುದು ಎಂದಿದ್ದಾರೆ.
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕಾರದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅಮಿತಾ ಬ್ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದರು.
Pingback: CI-CD Services