ಸದ್ಯದಲ್ಲೇ ಚಿತ್ರಮಂದಿರಗಳಲ್ಲಿ ‘ಪ್ರಾರಂಭ’

ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ ‘ಪ್ರಾರಂಭ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಸದ್ಯದಲ್ಲೇ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲ್ಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್ ಹಾಗೂ ಹಾಡುಗಳು ಸಿನಿರಸಕರ ಮನಗೆದ್ದಿದೆ.
ಮನು ಕಲ್ಯಾಡಿ ರಚನೆ ಹಾಗೂ ನಿರ್ದೇಶನದ ಈ ಚಿತ್ರವನ್ನು ಜಗದೀಶ್ ಕಲ್ಯಾಡಿ ಅವರು ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಮೂಲಕ ನಿರ್ಮಿಸಿದ್ದಾರೆ.

‘ಪ್ರಾರಂಭ` ಒಂದು ಅದ್ಭುತ ಕಥಾಹಂದರವಿರುವ ಚಿತ್ರ ಕಥೆಯಲ್ಲಿ ಈ ಸಮಾಜಕ್ಕೆ ಪ್ರತ್ಯೇಕವಾಗಿ ಯುವಕ-ಯುವತಿಯರಿಗೆ ಒಂದು ಒಳ್ಳೆಯ ಸಂದೇಶ ಸಾರುವ ಸಿನಿಮಾ. ನಾಯಕ ಮನೋರಂಜನ್ ರವಿಚಂದ್ರನ್ ಅವರು ಮೂರು ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ನಿರ್ದೇಶಕ ಮನು ಕಲ್ಯಾಡಿ ತಿಳಿಸಿದ್ದಾರೆ.

೫ಹಾಡುಗಳಿರುವ ಈ ಚಿತ್ರಕ್ಕೆ ಪ್ರಜ್ವಲ್ ಪೈ ಅವರ ಸಂಗೀತ ನಿರ್ದೇಶನವಿದೆ. ೨ ಸಾಹಸ ಸನ್ನಿವೇಶಗಳಿದ್ದು , ಥ್ರಿಲ್ಲರ್ ಮಂಜು ಹಾಗೂ ವಿಕ್ರಂ ಮೋರ್ ಸಾಹಸ ನಿರ್ದೇಶನ ಮಾಡಿದ್ದಾರೆ. ಸುರೇಶ್‌ಬಾಬು ಛಾಯಾಗ್ರಹಣ, ವಿಜಯ್.ಎನ್.ಕುಮಾರ್ ಸಂಕಲನ, ಸಂತು, ಗೀತಾ ನೃತ್ಯ ನಿರ್ದೇಶನ ಹಾಗೂ ರವಿ ಸಂತೆಹೈಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸಂತೋಷ್ ನಾಯಕ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.

ಈ ಚಿತ್ರದಲ್ಲಿ ಮನೋರಂಜನ್ ಅವರಿಗೆ ನಾಯಕಿಯಾಗಿ ಕೀರ್ತಿ ಕಲಕೇರಿ ಅಭಿನಯಿಸಿದ್ದಾರೆ. ಉಳಿದಂತೆ ಕಡ್ಡಿಪುಡ್ಡಿ ಚಂದ್ರು, ಹನುಮಂತೇಗೌ ರಾಘು ಶ್ರೀವಾಸ್ತವ್, ಶಾಂಭವಿ, ಸೂರಜ್(ಕಾಮಿಡಿ ಕಿಲಾಡಿಗಳು) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಈ ಹಿಂದೆ ‘ಉಪುö್ಪ ಹುಳಿ ಖಾರ’ ಚಿತ್ರಕ್ಕೆ ಸಂಗೀತ ನೀಡಿದ್ದ, ಪ್ರಜ್ವಲ್ ಪೈ ಈ ಚಿತ್ರಕ್ಕೂ ಸಂಗೀತ ನೀಡಿದ್ದಾರೆ. ಸಂತೋಷ್ ನಾಯಕ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. ಸುರೇಶ್ ಬಾಬು ಛಾಯಾಗ್ರಹಣ, ವಿಜಯ್ ಎಂ ಕುಮಾರ್ ಸಂಕಲನ, ವಿಕ್ರಂ ಮೋರ್ ಸಾಹಸ ನಿರ್ದೇಶನ ಹಾಗೂ ರವಿ ಸಂತೆಹೈಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

This Article Has 2 Comments
  1. Pingback: klik op deze site

  2. Pingback: DevOps

Leave a Reply

Your email address will not be published. Required fields are marked *

Translate »
error: Content is protected !!