ಬಿಡುಗಡೆ ತಯಾರಿಯಲ್ಲಿ “PRESENT ಪ್ರಪಂಚ 0% ಲವ್”

ಫ್ರೆಂಡ್ಸ್ ಮೀಡಿಯಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕೃಷ್ಣಮೂರ್ತಿ ಹಾಗೂ ರವಿಕುಮಾರ್ ಹೆಚ್.ಪಿ ಅವರು ನಿರ್ಮಿಸಿರುವ “Present ಪ್ರಪಂಚ 0% ಲವ್” ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಸದ್ಯದಲ್ಲೇ ಚಿತ್ರವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಲಿದೆ. ಏಪ್ರಿಲ್‍ನಲ್ಲಿ ಚಿತ್ರದ ಆಡಿಯೋ ಬಿಡುಗಡೆಯಾಗಲಿದೆ.

ಈ ಹಿಂದೆ ಸಂಯುಕ್ತ 2 ಚಿತ್ರವನ್ನು ನಿರ್ದೇಶಿಸಿದ್ದ ಅಭಿರಾಮ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಕಾಮಿಡಿ, ಲವ್, ಸೆಂಟಿಮೆಂಟ್ ಹಾಗೂ ಕೌಟುಂಬಿಕ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.
ಮೂರು ಹಾಡುಗಳಿರುವ ಈ ಚಿತ್ರಕ್ಕೆ ಕೆ.ವಿ.ರವಿತೇಜಸ್ವಿ ಸಂಗೀತ ನೀಡಿದ್ದಾರೆ.

ಈಶ್ವರಿ ಸುರೇಶ್ ಛಾಯಾಗ್ರಹಣ, ವೆಂಕಿ ಸಂಕಲನ, ಕುಂಫು ಚಂದ್ರು, ಅಲ್ಟಿಮೆಟ್ ಶಿವು ಸಾಹಸ ನಿರ್ದೇಶನ ಹಾಗೂ ಹರಿಕೃಷ್ಣ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಡಾ||ವಿ.ನಾಗೇಂದ್ರಪ್ರಸಾದ್ ಬರೆದಿದ್ದಾರೆ.

ಈ ಹಿಂದೆ ಕೆಮಿಸ್ತ್ರಿ ಕರಿಯಪ್ಪ ಹಾಗೂ ಸಂಯುಕ್ತ 2 ಚಿತ್ರದ ನಿರ್ಮಾಪಕರಾಗಿದ್ದ ಅರ್ಜುನ್ ಮಂಜುನಾಥ್ ಈ ಚಿತ್ರದ ನಾಯಕ. ರಂಗಭೂಮಿ ಹಿನ್ನೆಲೆಯ ಯಶಸ್ ಅಭಿ ಈ ಚಿತ್ರದ ಪ್ರಮುಖ ಪಾತ್ರದಲ್ಲಿದ್ದಾರೆ. ಸಂಭ್ರಮ ಶ್ರೀ, ಅಕ್ಷತ ಈ ಚಿತ್ರದ ನಾಯಕಿಯರು. ತಬಲನಾಣಿ, ಲಯೇಂದ್ರ, ಎಸ್.ನಾರಾಯಣ್, ಓಂಪ್ರಕಾಶ್‍ರಾವ್, ಚಂದನ್ ಆಚಾರ್, ಸಂಜನ, ಗೋವಿಂದೇಗೌಡ, ಉಮೇಶ್ ಪುಂಗ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!