ಪಿ ಆರ್ ಕೆ ಪ್ರೊಡಕ್ಷನ್ಸ್​ನಲ್ಲಿ ಈಗ ಮತ್ತೊಂದು ಪ್ರಯೋಗಾತ್ಮಕ ಸಿನಿಮಾ!

ಪ್ರಯೋಗಾತ್ಮಕ ಚಿತ್ರಗಳ ನಿರ್ಮಾಣ ಮಾಡಿ ಗಮನ‌ಸೆಳೆದಿರುವ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಒಡೆತನದ ಪಿ ಆರ್ ಕೆ ಪ್ರೊಡಕ್ಷನ್ಸ್​ನಲ್ಲಿ ಈಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ತಯಾರಿ ಶುರುವಾಗಿದೆ.

ಅಶ್ವಿನಿ ಪುನೀತ್ ರಾಜಕುಮಾರ್, ಲಿಖಿತ್ ಶೆಟ್ಟಿ ಹಾಗೂ ದೇಶ್ ರಾಹ್ ರೈ ನಿರ್ಮಾಣದಲ್ಲಿ ಈ ಹಿಂದೆ ‘ಸಂಕಷ್ಟಕರ ಗಣಪತಿ’ ಚಿತ್ರವನ್ನು ನಿರ್ದೇಶಿಸಿದ್ದ‌ ಅರ್ಜುನ್ ಕುಮಾರ್ ಎಸ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಸಂಕಷ್ಟಕರ ಗಣಪತಿ ಚಿತ್ರದ ನಾಯಕ‌ ಲಿಖಿತ್ ಶೆಟ್ಟಿ ಈ ಚಿತ್ರದಲ್ಲಿ ಲೀಡ್ ರೋಲ್ ಪ್ಲೇ ಮಾಡುತ್ತಿದ್ದು, ಫೀಮೇಲ್ ಲೀಡ್ ರೋಲ್​ನಲ್ಲಿ ಅಮೃತ ಅಯ್ಯಂಗಾರ್ ಕಾಣಿಸಲಿದ್ದಾರೆ. ಚಿತ್ರತಂಡ ಶೀಘ್ರದಲ್ಲೇ ಟೈಟಲ್ ರಿವೀಲ್ ಮಾಡಲಿದೆ. ಸದ್ಯ ಚಿತ್ರತಂಡ ಪ್ರೀ ಪ್ರೋಡಕ್ಷನ್ ವರ್ಕ್​ನಲ್ಲಿ ಬ್ಯುಸಿ ಇದ್ದು, ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.

ಕಾಮಿಡಿ ಡಾನ್ ರಂಗಾಯಣ ರಘು, ಅಚ್ಯುತ ಕುಮಾರ್, ತಿಲಕ್, ಅಶ್ವಿನಿ ಗೌಡ, ನಾಗಭೂಷಣ್ ಮುಂತಾದವರನ್ನೊಳಗೊಂಡ ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ. ಗುರುಕಿರಣ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಟಗರು ಖ್ಯಾತಿಯ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ.

ಲಿಖಿತ್ ಶೆಟ್ಟಿ ಹಾಗೂ ಅಮೃತ ಅಯ್ಯಂಗಾರ್

Be the first to comment

Leave a Reply

Your email address will not be published. Required fields are marked *

Translate »
error: Content is protected !!