ನಿರ್ಮಾಪಕ ರಮೇಶ್ ರೆಡ್ಡಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಲ್ಯಾಣ ನಿಧಿ ಅಧ್ಯಕ್ಷರಾದ ಸಾ.ರಾ. ಗೋವಿಂದು, ಕಾರ್ಮಿಕರ ಸಂಘದ ಉಪಾಧ್ಯಕ್ಷರಾದ ರವಿ ಶಂಕರ್ ಸೇರಿದಂತೆ ಹಲವರು ಈ ಕಾರ್ಯಕ್ಕೆ ಚಾಲನೆ ನೀಡಿದರು. ಇನ್ಪೋಸಿಸ್ ಫೌಂಡೇಷನ್ ವತಿಯಿಂದ ಇಂದು ಸಾಂಕೇತಿಕವಾಗಿ ಚಾಲನೆ ನೀಡಿದ್ದು, ಮುಂಬರುವ6 ದಿನಗಳಲ್ಲಿ ಕಾರ್ಮಿಕರ ಸಂಘಟನೆಗಳ ಪದಾಧಿಕಾರಿಗಳು ವಿತರಣೆಯ ಕಾರ್ಯವನ್ನು ಮುಂದುವರೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗಾಳೀಪಟ – 2 ಸಿನೆಮಾದ ನಿರ್ಮಾಪಕರಾದ ರಮೇಶ್ ರೆಡ್ಡಿ, ಇನ್ಪೋಸಿಸ್ ಫೌಂಡೇಷನ್ ವತಿಯಿಂದ ದೇಶ ಹಾಗೂ ರಾಜ್ಯದಲ್ಲಿ ಅನೇಕ ಒಳ್ಳೆಯ ಕೆಲಸಗಳು ಆಗುತ್ತಿವೆ. ಈ ತೊಂದರೆಯ ಸಮಯದಲ್ಲಿ ಚಲನಚಿತ್ರ ಕಾರ್ಮಿಕರ ಬಗ್ಗೆ ಕಾಳಜಿಯನ್ನು ತೋರಿಸಿರುವುದು ಸ್ವಾಗತಾರ್ಹ ವಿಷಯವಾಗಿದೆ ಎಂದು ಹೇಳಿದರು.
ಸಾ.ರಾ.ಗೋವಿಂದು ಮಾತನಾಡಿ, 18 ಚಲನ ಚಿತ್ರ ಕಾರ್ಮಿಕ ಸಂಘಟನೆಗಳ ಅಡಿಯಲ್ಲಿ ಸಾವಿರಾರು ಕುಟುಂಬಗಳು ಜೀವನ ಸಾಗಿಸುತ್ತಿವೆ. ಕರೋನಾ ಕರ್ಪ್ಯೂದಿಂದಾಗಿ ಎಲ್ಲರ ಜೀವನ ತೊಂದರೆಗೆ ಸಿಲುಕಿದೆ. ಅವರ ಜೀವನಕ್ಕೆ ಅಗತ್ಯವಿರುವ ವಸ್ತುಗಳನ್ನು ನೀಡಲು ಇನ್ಪೋಸಿಸ್ ಫೌಂಡೇಷನ್ ಮುಂದಾಗಿರುವುದು ಬಹಳ ಸಂತಸದ ವಿಷಯವಾಗಿದೆ ಎಂದು ಹೇಳಿದರು.
Be the first to comment