ಪೊಲೀಸ್ ಪ್ರಕ್ಕಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಜಶೇಖರ್ ಅವರು ನಿರ್ಮಿಸಿರುವ ‘ತ್ರಿಕೋನ` ಚಿತ್ರ ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರ ನೀಡಿದೆ.. ಯಾವುದೇ ಕಟ್ ನೀಡದೆ, ಸೌಂಡ್ ಮ್ಯೂಟ್ ಸಹ ನೀಡದೆ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರ ನೀಡಿದೆ.
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ಮಾಪಕ ರಾಜಶೇಖರ್ ಅವರೆ ಕಥೆ ಬರೆದದ್ದು, 143 ಚಿತ್ರದ ಖ್ಯಾತಿಯ ಚಂದ್ರಕಾಂತ್ ನಿರ್ದೇಶನ ಮಾಡಿದ್ದಾರೆ…ಕನ್ನಡ, ತೆಲುಗು, ತಮಿಳು ಮೂರು ಭಾಷೆಗಳಲ್ಲಿ ವಿಭಿನ್ನ ಚಿತ್ರಕಥೆಯೊಂದಿಗೆ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಮೊದಲು ಕನ್ನಡದಲ್ಲಿ ಸೆನ್ಸಾರ್ ಆಗಿದೆ… ತೆಲುಗು, ತಮಿಳಿನಲ್ಲೂ ಸದ್ಯದಲ್ಲೇ ಸೆನ್ಸಾರ್ ಆಗಲಿದೆ… ಮೂರು ಭಾಷೆಗಳಲ್ಲಿ ಮೂರು ಬೇರೆ ಚಿತ್ರಕಥೆಯೊಂದಿಗೆ
ನಿರ್ಮಾಣವಾಗಿರುವುದು ಚಿತ್ರರಂಗದ ಇತಿಹಾಸದಲ್ಲೇ ಪ್ರಥಮ ಎನ್ನುವುದು ನಿರ್ಮಾಪಕರ ಅನಿಸಿಕೆ. ನಿರ್ದೇಶಕರ ಹೊರತುಪಡಿಸಿ ಆಯಾ ಭಾಷೆಗಳಲ್ಲಿ ಅಲ್ಲಿನ ನುರಿತ ತಂತ್ರಜ್ಞರು ಕಾರ್ಯ ನಿರ್ವಹಿಸಿದ್ದಾರೆ..
ಸರ್ಕಾರದಿಂದ ಚಿತ್ರ ಬಿಡುಗಡೆಗೆ ಅನುಮತಿ ಸಿಕ್ಕ ಕೂಡಲೆ, ‘ತ್ರಿಕೋನ’ ವನ್ನು ತೆರೆಗೆ ತರುವುದಾಗಿ ತಿಳಿಸಿರುವ ನಿರ್ಮಾಪಕ ರಾಜಶೇಖರ್ ಅವರು, ‘ಕೆಲವರು ಚಿತ್ರ ಬಿಡುಗಡೆಗೆ ಅನುಮತಿ ದೊರತರು ಜನ ಬರುತ್ತಾರೊ, ಇಲ್ಲವೊ? ಎಂಬ ಭಾವನೆಯಿಂದ ಚಿತ್ರ ಬಿಡುಗಡೆಗೆ ಮುಂದೆ ಬಾರದೆ ಇರಬಹುದು.. ಆದರೆ ನಮ್ಮ ಚಿತ್ರ ಉತ್ತಮವಾಗಿ ಮೂಡಿಬಂದಿದ್ದು, ಜನ ನಮ್ಮ ಚಿತ್ರವನ್ನು ಮೆಚ್ಚಿ ಯಶಸ್ವಿಗೊಳಿಸುವ ನಂಬಿಕೆ ಇದೆ.. ಹಾಗಾಗಿ ಬಿಡುಗಡೆಗೆ
ಬೇಕಾಗಿರುವ ಪ್ರಚಾರಕಾರ್ಯವನ್ನು ಆರಂಭಿಸಿ, ಸೂಕ್ತ ಸಮಯದಲ್ಲಿ ಚಿತ್ರ ಬಿಡುಗಡೆ ಮಾಡುತ್ತೇನೆ.’ ಎಂದಿದ್ದಾರೆ.. ಸುರೇಂದ್ರನಾಥ್ ಸಂಗೀತ ನಿರ್ದೇಶನ, ಶ್ರೀನಿವಾಸ್ ವೆನಕೋಟ ಛಾಯಾಗ್ರಹಣ, ಜೀವನ್ ಪ್ರಕಾಶ್ ಸಂಕಲನ, ಹೈಟ್ ಮಂಜು ನೃತ್ಯ ನಿರ್ದೇಶನ ಹಾಗೂ ಜಾನಿ, ಚೇತನ್ ಡಿಸೋಜ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಸುರೇಶ್ ಹೆಬ್ಳೀಕರ್, ಲಕ್ಷ್ಮೀ, ಅಚ್ಯುತ ಕುಮಾರ್, ಸುಧಾರಾಣಿ, ಸಾಧುಕೋಕಿಲ, ಭಜರಂಗಿ ಮಾರುತೇಶ್, ರಾಜವೀರ್, ಅದಿತಿ ರಾಜ್, ಹಾಸಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ..
Pingback: 부자티비