“ಫ್ಯಾಮಿಲಿ ಪ್ಯಾಕ್”ನ ಮೋಷನ್ ಪೋಸ್ಟರ್ ಬಿಡುಗಡೆ

ಸದಭಿರುಚಿ ಚಿತ್ರಗಳ ನಿರ್ಮಾಣಕ್ಕೆ ಹೆಸರಾಗಿರುವ ಪಿ. ಆರ್. ಕೆ. ಪ್ರೊಡಕ್ಷನ್ಸ್‌ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿರುವ “ಫ್ಯಾಮಿಲಿ ಪ್ಯಾಕ್” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.

ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಲಿಖಿತ್ ಶೆಟ್ಟಿ ಈ ಚಿತ್ರದ ನಿರ್ಮಾಪಕರು. ಮನೋರಂಜನೆ ಪ್ರಧಾನವಾಗಿರುವ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.

ಈ ಹಿಂದೆ ಸಂಕಷ್ಟ ಕರ ಗಣಪತಿ ಚಿತ್ರವನ್ನು ನಿರ್ದೇಶಿಸಿದ್ದ‌ ಅರ್ಜುನ್ ಕುಮಾರ್ .ಎಸ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಂಕಷ್ಟಕರ ಗಣಪತಿ ಚಿತ್ರದ ನಾಯಕ‌ ಲಿಖಿತ್ ಶೆಟ್ಟಿ ಈ ಚಿತ್ರದಲ್ಲೂ ನಾಯಕನಾಗಿ ಅಭಿನಯಿಸುತ್ತಿದ್ದಾರೆ.

ಅಮೃತ ಅಯ್ಯಂಗಾರ್ ನಾಯಕಿಯಾಗಿ ನಟಿಸಲಿರುವ ಈ ಚಿತ್ರದ ತಾರಾಬಳಗದಲ್ಲಿ ರಂಗಾಯಣ ರಘು, ಅಚ್ಯುತಕುಮಾರ್, ದತ್ತಣ್ಣ, ತಿಲಕ್, ನಾಗಭೂಷಣ್ ಮುಂತಾದವರಿದ್ದಾರೆ. ಗುರುಕಿರಣ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಉದಯಲೀಲ ಅವರ ಛಾಯಾಗ್ರಹಣವಿದೆ. ಮಾಸ್ತಿ ಫ್ಯಾಮಿಲಿ ಪ್ಯಾಕ್ ಗೆ ಸಂಭಾಷಣೆ ಬರೆಯುತ್ತಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!