ಕಳೆದ ಆರು ತಿಂಗಳಿನಿಂದ ಮುಚ್ಚಲ್ಪಟ್ಟಿರುವ ಚಿತ್ರಮಂದಿರಗಳು ಅಕ್ಟೋಬರ್ 1 ರಿಂದ ತೆರೆಯಲಿದೆ ಎಂಬ ವಿಚಾರ ಹೊರಬಿದ್ದಿದೆ. ಮುಂದಿನ ತಿಂಗಳ ಆರಂಭದಿಂದ ಸಿನಿಮಾ ಮಂದಿರ ಕಾರ್ಯನಿರ್ವಹಿಸಲು ಕೇಂದ್ರ ಸಮ್ಮತಿ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ, ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಜೊತೆ ಚರ್ಚಿಸಿದ್ದು, ಅಕ್ಟೋಬರ್ 1 ರಿಂದ ದೇಶಾದ್ಯಂತ ಚಿತ್ರಮಂದಿರ ತೆರೆಯಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ ಕನ್ನಡ ಚಲನಚಿತ್ರರಂಗದ ಪರವಾಗಿ ಶಿವರಾಜ್ ಕುಮಾರ್ ನೇತೃತ್ವದ ನಿಯೋಗ ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದೆ. ಲಾಕ್ಡೌನ್ನಿಂದ ಸಂಕಷ್ಟದಲ್ಲಿರುವ ಚಿತ್ರರಂಗಕ್ಕೆ ನೆರವು ನೀಡಬೇಕು ಹಾಗೂ ಚಿತ್ರಮಂದಿರ ತೆರೆಯಲು ಅನುವು ಮಾಡಿಕೊಡಬೇಕು ಎಂದು ವಿನಂತಿಸಿದೆ.
ಈ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್, ಶಿವರಾಜ್ ಕುಮಾರ್, ತಾರಾ ಅನುರಾಧ, ಸಾ.ರಾ.ಗೋವಿಂದು, ನಟ ಯಶ್ ಮತ್ತು ದುನಿಯಾ ವಿಜಯ್ ಹಾಗೂ ನಿರ್ಮಾಪಕ, ನಿರ್ದೇಶಕರುಗಳು ಭಾಗಿಯಾಗಿದ್ದರು
Pingback: rolex replica
Pingback: CI/CD
Pingback: Margate auto glass shop