ಇಂದು ಡಾ. ವಿಷ್ಣುವರ್ಧನ್​​ 70ನೇ ಬರ್ತ್​ಡೇ ವಿಶೇಷ

ಅಭಿನಯ ಭಾರ್ಗವ, ಸಾಹಸಸಿಂಹ ಡಾ. ವಿಷ್ಣುವರ್ಧನ್ ಹುಟ್ಟಿದ ದಿನ ಇಂದು. ರಾಜ್ಯಾದ್ಯಂತ ಅಭಿಮಾನಿಗಳು ಡಾ. ವಿಷ್ಣುವರ್ಧನ್ 70ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಇನ್ನು 11 ವರ್ಷಗಳ ಬಳಿಕ ವಿಷ್ಣು ಸ್ಮಾರಕ ನಿರ್ಮಾಣದ ಕಾರ್ಯ ಕೂಡಾ ಮೈಸೂರಿನಲ್ಲಿ ಆರಂಭವಾಗಿದೆ.ಡಾ. ವಿಷ್ಣುವರ್ಧನ್ ಅವರ 70ನೇ ಜನ್ಮದಿನದ ಅಂಗವಾಗಿ ಪೋಸ್ಟಲ್ ಕವರ್ ಬಿಡುಗಡೆ ಮಾಡಲಾಗುತ್ತಿದೆ. ಇದು ರಾಷ್ಟ್ರಮಟ್ಟದಲ್ಲಿ ಡಾ. ವಿಷ್ಣುವರ್ಧನ್ ಅವರಿಗೆ ಸಲ್ಲುತ್ತಿರುವ ಗೌರವವಾಗಿದೆ. ಡಾ. ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರ ಪ್ರಯತ್ನದಿಂದ ಮಧ್ಯಾಹ್ನ 3 ಕ್ಕೆ ವಿಧಾನ ಸೌಧದ ಎದುರಿನ ಕೇಂದ್ರ ಅಂಚೆ ಇಲಾಖೆಯಲ್ಲಿ ಈ ಲಕೋಟೆ ಬಿಡುಗಡೆ ಆಗಲಿದೆ. ಈ ಸಮಾರಂಭಕ್ಕೆ ಜೋಗಿ ಪ್ರೇಮ್, ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಶಾರದಾ ಸಂಪತ್, ಡಾ ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಭಾಗವಹಿಸಲಿದ್ದಾರೆ.

ಇನ್ನು ರಾಜ್ಯಾದ್ಯಂತ ಈ ದಿನ ಡಾ. ವಿಷ್ಣುವರ್ಧನ್ 70ನೇ ಜನ್ಮದಿನವನ್ನು ವಿವಿಧ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಆಚರಿಸಲಾಗುತ್ತಿದೆ.

This Article Has 2 Comments
  1. Pingback: Regression Testing

  2. Pingback: how to make cornhole boards

Leave a Reply

Your email address will not be published. Required fields are marked *

Translate »
error: Content is protected !!