ಕೊಟ್ಟಿಗೆ ಹಾರದಲ್ಲಿ ‘ಕಸ್ತೂರಿ ಮಹಲ್’ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ.

ಕರುನಾಡ ಪ್ರಕೃತಿ ಸೌಂದರ್ಯ ಹೆಚ್ಚಿಸಿರುವಲ್ಲಿ ಕೊಟ್ಟಿಗೆ ಹಾರದ್ದು ಮಹತ್ವದ ಪಾತ್ರ. ಮಳೆಗಾಲದಲ್ಲಿ ಇದರ ವೈಭವ ಕೇಳುವುದೇ ಬೇಡ. ಇಂತಹ ಸುಂದರ ಪರಿಸರದಲ್ಲಿ ಕಸ್ತೂರಿ ಮಹಲ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ.
ಅಕ್ಟೋಬರ್ 5ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಮಾತಿನ ಭಾಗದ ಚಿತ್ರೀಕರಣ ‌ಬಿರುಸಿನಿಂದ ಸಾಗಿದೆ.‌ ಶಾನ್ವಿ ಶ್ರೀವಾಸ್ತವ್, ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.

ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶಿಸುತ್ತಿದ್ದಾರೆ. ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಇದು ಅವರ ನಿರ್ದೇಶನದ 50ನೇ ಚಿತ್ರ.
ಶ್ರೀಭವಾನಿ‌ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ನಿರ್ಮಿಸುತ್ತಿರುವ‌ ಈ ಚಿತ್ರಕ್ಕೆ ನವೀನ್ ಆರ್ ಸಿ ಹಾಗೂ  ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಸೌಂದರ್ ರಾಜ್ ಅವರ ಸಂಕಲನ ಕಸ್ತೂರಿ ಮಹಲ್ ಚಿತ್ರಕ್ಕಿದೆ.

ಬಹುಭಾಷ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್, ಅಕ್ಷರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

This Article Has 1 Comment
  1. Pingback: auto glass shop Keller TX

Leave a Reply

Your email address will not be published. Required fields are marked *

Translate »
error: Content is protected !!