ಸಾಕಷ್ಟು ಸೂಪರ್ ಹೀರೋ ಕಾನ್ಸೆಪ್ಟ್ ನ ಚಿತ್ರಗಳು ಬಂದಿವೆ. ಆದರೆ ಮಹಿಳಾ ಪ್ರಧಾನದ ಸೂಪರ್ ಹೀರೋ ಕನ್ಸೆಪ್ಟ್ ನ ಚಿತ್ರ ಭಾರತದಲ್ಲಿ ಈವರೆಗೂ ಬಂದಿಲ್ಲ. ಆನ ಚಿತ್ರವೇ ಮೊದಲ ಎನ್ನಬಹುದು. ನಟಿ ಅದಿತಿ ಪ್ರಭುದೇವ ಫೀಮೇಲ್ ಸೂಪರ್ ಹೀರೋ ಆಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅದಿತಿ ಪ್ರಭುದೇವ ಈ ಹಿಂದೆ ಮಾಡಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರ ನಿರ್ವಹಣೆ ಮಾಡಿದ್ದಾರೆ.
ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಹೆಸರುಫಟ್ಟ ಬಳಿ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ನಡೆಸಲಾಗಿದ್ದು, ಅಲ್ಲೇ ಚಿತ್ರೀಕರಣ ಪೂರ್ಣಗೊಳಿಸಿ ಕುಂಬಳಕಾಯಿ ಒಡೆಯಲಾಗಿದೆ. ಮಾತಿನ ಜೋಡಣೆ ಕೂಡ ಮುಕ್ತಾಯ ಹಂತದಲ್ಲಿದ್ದು, ಮಾರ್ಚ್ ನಲ್ಲಿ ಚಿತ್ರ ತೆರೆಗೆ ಬರುವ ಸಾಧ್ಯತೆಯಿದೆ. ಮನೋಜ್ ಪಿ ನಡುಲಮನೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಹಲವು ಕಿರು ಹಾಗೂ ಟೆಲಿ ಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ಮನೋಜ್ ಅವರಿಗೆ ಹಿರಿತೆರೆಯಲ್ಲಿ ಇದು ಚೊಚ್ಚಲ ನಿರ್ದೇಶನದ ಚಿತ್ರ.
ಯು.ಕೆ.ಪ್ರೊಡಕ್ಷನ್ಸ್_ ಲಾಂಛನದಲ್ಲಿ ಪೂಜಾವಸಂತಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಉದಯ್ ಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳೀಧರನ್ಅ ವರ ಸಂಗೀತ ನಿರ್ದೇಶನವಿರುವ “ಆನ” ಗೆ ವಿಜೇತ್ ಚಂದ್ರ ಅವರ ಸಂಕಲನವಿದೆ.
ಅದಿತಿ ಪ್ರಭುದೇವ, ಸುನೀಲ್ ಪುರಾಣಿಕ್, ಚೇತನ್ ಗಂಧರ್ವ, ಸುನೀಲ್ ಕುಮಾರ್ ಡಿ.ಕೆ, ವಿಕಾಶ್ ಉತ್ತಯ್ಯ, ಪ್ರೇರಣ ಕಂಬಂಮ್, ವರುಣ್ ಅಮರವಾತಿ, ಸಮರ್ಥ್ ನರಸಿಂಹರಾಜು, ಕಾರ್ತಿಕ್ ನಾಗಾರಾಜಾನ್, ಶಿವಮಂಜು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Be the first to comment