ಸ್ಯಾಂಡಲ್ ವುಡ್ ನ ಕಲಾ ಸಾಮ್ರಾಟ್ ಎಸ್ ನಾರಾಯಣ್ ಅವರು ಇನ್ಮುಂದೆ ಡಾ. ಎಸ್ ನಾರಾಯಣ್ ಆಗಿದ್ದಾರೆ. ಹೌದು, ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.
ಚಿತ್ರರಂಗದಲ್ಲಿ ನಾರಾಯಣ್ ಅವರ ಸೇವೆಯನ್ನು ಗುರುತಿಸಿ ಯೂನಿವರ್ಸಲ್ ಡೆವಲಪ್ ಮೆಂಟ್ ಕೌನ್ಸಿಲ್ ಗೌರವ ಡಾಕ್ಟರೇಟ್ ನೀಡಿದೆ. ಇತ್ತೀಚಿಗೆ ಹೊಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಸ್ಯಾಂಡಲ್ ವುಡ್ ನಲ್ಲಿ ನಿರ್ದೇಶಕರಾಗಿ, ನಟರಾಗಿ, ನಿರ್ಮಾಪಕರಾಗಿ ಎಸ್ ನಾರಾಯಣ್ ಚಿತ್ರರಂಗದಲ್ಲಿ ಸೇವೆ ಸಲ್ಲಿದ್ದಾರೆ. ಚೈತ್ರದ ಪ್ರೇಮಾಂಜಲಿ ಸಿನಿಮಾಗೆ ನಿರ್ದೇಶನ ಮಾಡುವ ಮೂಲಕ ಸಿನಿಮಾ ಪಯಣ ಪ್ರಾರಂಭ ಮಾಡಿದ ಎಸ್ ನಾರಾಯಣ್ ಸುಮಾರು 30 ವರ್ಷಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಸೇವೆ
ಸ್ಯಾಂಡಲ್ ವುಡ್ ನ ಘಟಾನುಘಟಿ ಸ್ಟಾರ್ ನಟರಿಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಡಾ.ರಾಜ್ ಕುಮಾರ್ ನಟನೆಯ ಶಬ್ಧವೇದಿ, ಸಾಹಸಸಿಂಹ ವಿಷ್ಣುವರ್ಧನ್ ಅವರ ಸೂರ್ಯವಂಶ, ನಟ ರವಿಚಂದ್ರನ್ ಸೇರಿದಂತೆ ಅನೇಕ ಸ್ಟಾರ್ ನಟರಿಗೆ ಆಕ್ಷನ್ ಕಟ್ ಹೇಳಿದ್ದಾರೆ.
ನಿರ್ದೇಶಕದ ಜೊತೆಗೆ ಎಸ್ ನಾರಾಯಣ್ ಸಾಕಷ್ಟು ಸಿನಿಮಾಗಳಲ್ಲೂ ನಟಿಸಿದ್ದಾರೆ. ಇದುವರೆಗೂ ಸುಮಾರು 49ಸಿನಿಮಾಗಳನ್ನು ಎಸ್ ನಾರಾಯಣ್ ನಿರ್ದೇಶನ ಮಾಡಿದ್ದಾರೆ. ವಿಶೇಷ ಎಂದರೆ ತಮಿಳಿನಲ್ಲೂ ಒಂದು ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.
Be the first to comment