‘ದಾರಿ ಯಾವುದಯ್ಯಾ ವೈಕುಂಠಕೆ’ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ

ಶ್ರೀ ಬಸವೇಶ್ವರ ಕ್ರಿಯೇಷನ್ಸ್ ಲಾಂಛನದಲ್ಲಿ ಶರಣಪ್ಪ ಎಂ ಕೊಟಗಿ ಅವರು ನಿರ್ಮಿಸಿರುವ ‘ದಾರಿ ಯಾವುದಯ್ಯಾ ವೈಕುಂಠಕೆ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಚಿತ್ರ ವೀಕ್ಷಿಸಿದ ನಂತರ ಸೆನ್ಸಾರ್ ಮಂಡಳಿ ಸದಸ್ಯರು, ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಉತ್ತಮ‌ ಕಥೆ ಆಯ್ಕೆ ಮಾಡಿಕೊಂಡಿದ್ದೀರಿ ಎಂದು ನಿರ್ದೇಶಕರನ್ನು ಪ್ರಶಂಸಿಸಿದ್ದಾರೆ.
ಈ ವಿಷಯದಿಂದ ಸಂತಸಗೊಂಡಿರುವ ನಿರ್ದೇಶಕ ಸಿದ್ದು ಪೂರ್ಣಚಂದ್ರ, ಚಿತ್ರರಸಿಕರಿಗೂ ನಮ್ಮ ಸಿನಿಮಾ ಮೆಚ್ಚುಗೆಯಾಗಲಿದೆ ಎಂಬ ಭರವಸೆ ಹೊಂದಿದ್ದಾರೆ.

ಇತ್ತೀಚೆಗೆ ನಟ ಧೃವ ಸರ್ಜಾ ಅವರಿಂದ ಬಿಡುಗಡೆಯಾಗಿದ್ದ ಚಿತ್ರದ ಫಸ್ಟ್ ಲುಕ್ ಗೂ ಉತ್ತಮ‌ ಪ್ರತಿಕ್ರಿಯೆ ದೊರೆಕಿದೆ. ಈ ಹಿಂದೆ ‘ಕೃಷ್ಣ ಗಾರ್ಮೆಂಟ್ಸ್’ ಚಿತ್ರ ನಿರ್ದೇಶಿಸಿದ್ದ ಸಿದ್ದು ಪೂರ್ಣಚಂದ್ರ ಈ ಚಿತ್ರದ ನಿರ್ದೇಶಕರು. ವರ್ಧನ್ ನಾಯಕರಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಅನುಷ, ‘ತಿಥಿ’ ಚಿತ್ರದ ಖ್ಯಾತಿ ಪೂಜಾ, ಬಲ ರಾಜವಾಡಿ, ಶೀಬಾ, ಪ್ರಶಾಂತ್ ರಾವ್ ವರ್ಕು, ಅರುಣ್‌ ಮೂರ್ತಿ, ಸಂಗೀತ, ಗೌಡಿ, ಸಿದ್ಧಾರ್ಥ್, ಪ್ರಣಯ್ ಮೂರ್ತಿ, ಸ್ಪಂದನ ಪ್ರಸಾದ್, ದಯಾನಂದ್. ಸುಚಿತ್, ಮೈಸೂರು ಬಸವರಾಜ್
ಮುಂತಾದವರಿದ್ದಾರೆ. ಲೋಕಿ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ನಿತಿನ್ ಛಾಯಾಗ್ರಹಣ ಹಾಗೂ ಮುತ್ತುರಾಜ್ ಸಂಕಲನವಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!