“ಒಲವೇ” ಆಲ್ಬಂ ಸಾಂಗ್ ನಲ್ಲಿ ಬಿಗ್ ಬಾಸ್ ಖ್ಯಾತಿ ಕೃತಿಕಾ ರವೀಂದ್ರ – ವರುಣ್ ಹೆಗಡೆ

ಸಮಾನ ಮನಸ್ಕರು ಸೇರಿ ನಿರ್ಮಿಸಿರುವ ಸುಕೃಶಿ ಕ್ರಿಯೇಷನ್ಸ್ ಸಂಸ್ಥೆ ವಿನೂತನ ಆಲ್ಬಮ್ ಸಾಂಗ್ ಒಂದನ್ನು ಹೊರತಂದಿದೆ. ಒಲವೇ ಎಂದು ಈಗಾಗಲೇ ಸಾಕಷ್ಟು ಸಂಚಲನ ಮೂಡಿಸಿರುವ ಈ ಹಾಡು ಸಿನಿಮೀಯ ರೂಪುರೇಷೆಗಳನ್ನು ಹೊಂದಿರುವುದು ಒಂದು ಪ್ರಮುಖ ಆಕರ್ಷಣೆ.

ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಸಾಕಷ್ಟು ಹೆಸರುವಾಸಿಯಾಗಿರುವ ನಟಿ ಕೃತ್ತಿಕಾ ರವೀಂದ್ರ ಅವರು6 ನಾಯಕಿಯಾಗಿ ಅಭಿನಯಿಸಿರುವ ಈ ಗೀತೆಯಲ್ಲಿ ವರುಣ್ ಹೆಗಡೆ ಅವರು ನಾಯಕನಾಗಿ ನಟಿಸಿದ್ದಾರೆ. ಯುವ ನಿರ್ದೇಶಕಿ ನಟಿ M S ಶಿವಾನಿ ಯವರ ಪರಿಕಲ್ಪನೆಗೆ ಗಾಯನ,ಸಾಹಿತ್ಯ ಹಾಗೂ ಸಂಗೀತ ಒದಗಿಸಿದ್ದಾರೆ ಗಾಯಕರಾದ ಡಾ॥ಸುಚೇತನ್ ರಂಗಸ್ವಾಮಿಯವರು.

ಒಂದು ಭಾವಪೂರ್ಣ ಕಥೆಯ ನಿರೂಪಣೆ ಹೊಂದಿರುವ ಈ ಗೀತೆಯ ಚಿತ್ರೀಕರಣ ಬೆಂಗಳೂರಿನ ಸುತ್ತಮುತ್ತ ನಡೆದಿದ್ದು ಕಾರ್ತಿಕ್ ಹಾಗೂ ನವೀನ್ ಅದ್ಭುತ ಛಾಯಾಗ್ರಹಣವನ್ನು ಮಾಡಿದ್ದಾರೆ. K.G.F ಖ್ಯಾತಿಯ ಸಂಕಲನಕಾರರಾದ ಶ್ರೀಕಾಂತ್ ಈ ಹಾಡಿನ ವೀಡಿಯೋವನ್ನು ಎಡಿಟ್ ಮಾಡಿದ್ದಾರೆ.

ಸುಪ್ರಸಿದ್ಧ ಆಡಿಯೋ ಕಂಪನಿ ಆನಂದ್ ಆಡಿಯೋಸ್ ಈ ಗೀತೆಯನ್ನು ಸಮರ್ಪಿಸುತ್ತಿದ್ದು ಜನವರಿ 3ರಂದು ಆನಂದ್ ಆಡಿಯೋಸ್ ನ ಎಲ್ಲಾ ಅಂತರ್ಜಾಲ ವೇದಿಕೆಗಳಲ್ಲಿ ಪ್ರೇಕ್ಷಕರ ಮುಂದೆ ಬರಲಿದೆ. ಹಲವಾರು ಯೋಜನೆಗಳನ್ನು ನಿರ್ಮಿಸಲು ಮುಂದಾಗಿರುವ ಸುಕೃಶಿ ಸಂಸ್ಥೆಯು ಜನರ ಮನ್ನಣೆ ಹಾಗೂ ಪ್ರೋತ್ಸಾಹವನ್ನ ನಿರೀಕ್ಷಿಸುತ್ತಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!