ಬಾಲಿವುಡ್ ನಟಿ ಅದಾ ಶರ್ಮಾ ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಚಿತ್ರ ‘ರಾಮರಸ’ ದಲ್ಲಿ ವಿಭಿನ್ನ ಮತ್ತು ಪ್ರಭಾವಶಾಲಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ತಮ್ಮ ವೈವಿಧ್ಯಮಯ ನಟನೆಯಿಂದ ಗುರುತಿಸಿಕೊಂಡಿರುವ ಅದಾ ಶರ್ಮಾ, ಈ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದು ಚಿತ್ರದ ತಾರಾಬಳಗಕ್ಕೆ ಮತ್ತಷ್ಟು ಮೆರುಗು ನೀಡಿದ್ದಾರೆ. ಚಿತ್ರದ ಇನ್ನೂ ಹಲವು ಪ್ರಮುಖ ಪಾತ್ರಗಳು ಹಾಗೂ ಯಾರೂ ಊಹಿಸದ ಸ್ಟಾರ್ ನಟರ ವಿವರಗಳನ್ನು ಸಸ್ಪೆನ್ಸ್ ಆಗಿ ಇಡಲಾಗಿದ್ದು, ಮುಂದಿನ ದಿನಗಳಲ್ಲಿ ಪರಿಚಯಿಸಲಾಗುವುದು ಎಂದು ಚಿತ್ರತಂಡ ತಿಳಿಸಿದೆ.
‘ರಾಮರಸ’ ತನ್ನ ಚಿತ್ರೀಕರಣದ ಎಲ್ಲಾ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಇದೀಗ ಪೋಸ್ಟ್-ಪ್ರೊಡಕ್ಷನ್ ಹಂತಕ್ಕೆ ಕಾಲಿಟ್ಟಿದೆ. ಚಿತ್ರದಲ್ಲಿ ಬಿಗ್ ಬಾಸ್ ಕನ್ನಡ ವಿಜೇತ ಕಾರ್ತಿಕ್ ಮಹೇಶ್, ಡೈನಮಿಕ್ ಸ್ಟಾರ್ ಪ್ರಜ್ವಲ್ ದೇವರಾಜ್, ಕಾಮಿಡಿ ಕಿಂಗ್ ಶರಣ್, ಮತ್ತು ಗ್ಲಾಮರಸ್ ನಟಿ ಹೆಬ್ಬಾ ಪಟೇಲ್ ಸೇರಿದಂತೆ ದೊಡ್ಡ ತಾರಾಗಣ ಪರದೆಯ ಮೇಲೆ ಅಬ್ಬರಿಸಲಿದೆ.
ಗುರು ದೇಶಪಾಂಡೆ ಮತ್ತು ವಿಕ್ರಂ ಆರ್ಯ ಅವರು ಈ ಚಿತ್ರವನ್ನು ಜಿ ಸಿನಿಮಾಸ್ ಪ್ರೊಡಕ್ಷನ್ಸೆ, ವೆನ್ ಸ್ಟಾರ್ ಮೂವೀಸ್ ಅಸೋಸಿಯೇಷನ್ ನೊಂದಿಗೆ ಅದ್ಧೂರಿಯಾಗಿ ನಿರ್ಮಿಸುತ್ತಿದ್ದಾರೆ.
ಚಿತ್ರಕ್ಕೆ ಕೃಷ್ಣ ಕುಮಾರ್ ಡಿಒಪಿ, ಬಿ.ಜೆ. ಭರತ್ ಸಂಗೀತ ನಿರ್ದೇಶನ , ಸಂಕಲನ ಅರ್ಜುನ್ ಕಿಟ್ಟು, ಡಾ. ನಾಗೇಂದ್ರ ಪ್ರಸಾದ್, ನಾಗಾರ್ಜುನ್ ಶರ್ಮಾ, ಪುನೀತ್ ರಂಗಸ್ವಾಮಿ ಸಾಹಿತ್ಯ , ಗುರು ದೇಶಪಾಂಡೆ ಅವರು ಕ್ರಿಯೇಟಿವ್ ಹೆಡ್ ಕಾರ್ಯನಿರ್ವಹಿಸುತ್ತಿದ್ದಾರೆ.
ಚಿತ್ರವನ್ನು ಆದಷ್ಟು ಬೇಗ ಬೆಳ್ಳಿಪರದೆಗೆ ತರಲು ಪೋಸ್ಟ್-ಪ್ರೊಡಕ್ಷನ್ ಸ್ಟುಡಿಯೋಗಳಲ್ಲಿ ಕೆಲಸಗಳು ಭರದಿಂದ ಸಾಗುತ್ತಿವೆ. ಶೀಘ್ರದಲ್ಲೇ ಚಿತ್ರದ ಅಧಿಕೃತ ಟೀಸರ್ ಬಿಡುಗಡೆ ದಿನಾಂಕ ಹಾಗೂ ಮುಂದಿನ ಪಾತ್ರಗಳ ಫಸ್ಟ್ ಲುಕ್ ಪೋಸ್ಟರ್‌ಗಳನ್ನು ಚಿತ್ರತಂಡ ಅನಾವರಣಗೊಳಿಸಲಿದೆ.
—-





Be the first to comment