ಗೌರಿ-ಗಣೇಶ ಹಬ್ಬಕ್ಕೆ’ಆಡಿಸಿದಾತ’ ಟೀಸರ್ ಬಿಡುಗಡೆ

ರಾಘವೇಂದ್ರ ರಾಜಕುಮಾರ್ ಅಭಿನಯದ ‘ಆಡಿಸಿದಾತ’ ಚಿತ್ರದ ಟೀಸರ್ ಗೌರಿ – ಗಣೇಶ ಹಬ್ಬದ ಸಮಯದಲ್ಲಿ ಬಿಡುಗಡೆಯಾಗಲಿದೆ. ಇದು ರಾಘವೇಂದ್ರ ರಾಜಕುಮಾರ್ ಅವರ ಅಭಿನಯದ 25ನೇ ಚಿತ್ರ.

ಶ್ರೀಮತಿ ಲಕ್ಷ್ಮೀ ಎಸ್ ಎ ಗೋವಿಂದರಾಜು ಹಾಗೂ ನಾಗರಾಜ್ ವಿ ಅವರ ಸಹಕಾರದೊಂದಿಗೆ ದುರ್ಗದ ಹುಲಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಹೆಚ್.ಹಾಲೇಶ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಫಣೀಶ್ ಭಾರದ್ವಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.

ಈಗಾಗಲೇ ಎರಡು ಹಾಡುಗಳು ಸೇರಿದಂತೆ ಕೆಲವು‌ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿರುವ ಈ ಚಿತ್ರಕ್ಕೆ ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ.

ಮನಮೋಹಕ ಹಾಡುಗಳಿಗೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಆನಂದ್ ಇಳಯರಾಜ ಛಾಯಾಗ್ರಹಣ, ಹರೀಶ್ ಕೊಮ್ಮಿ(ಮಫ್ತಿ) ಸಂಕಲನ ಹಾಗೂ ಬಾಲ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅಭಿನಯಿಸುತ್ತಿದ್ದಾರೆ ಖ್ಯಾತ ನಿರ್ದೇಶಕ ದೊರೆ ಭಗವಾನ್, ಗುರುದತ್, ಬಾಲರಾಜ್, ಸುಶ್ಮಿತ ದಾಮೋದರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!