ಅದಿತಿ”ಆನ”ಅದ್ಭುತ!

ಅದಿತಿ ಪ್ರಭುದೇವ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಹಾಗೂ ಭಾರತದ ಮೊದಲ ಮಹಿಳಾ ಪ್ರಧಾನ ಸೂಪರ್ ಹೀರೋ ಕಾನ್ಸೆಪ್ಟ್ ನ‌ “ಆನ‌” ಚಿತ್ರದ ಟೀಸರ್ ಇಂದು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಬಿಡುಗಡೆಯಾಗಿ ಕೆಲವೇ ನಿಮಿಷಗಳಲ್ಲಿ ಅಧಿಕ‌ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಅದಿತಿ ಪ್ರಭುದೇವ ಈ ಹಿಂದೆ ಮಾಡಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರ ನಿರ್ವಹಣೆ ಮಾಡಿದ್ದಾರೆ. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರುವ ಸಾಧ್ಯತೆಯಿದೆ. ಮನೋಜ್ ಪಿ ನಡುಲುಮನೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಹಲವು ಕಿರು ಹಾಗೂ ಟೆಲಿ ಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ಮನೋಜ್ ಅವರಿಗೆ ಹಿರಿತೆರೆಯಲ್ಲಿ ಇದು ಮೊದಲ ನಿರ್ದೇಶನದ ಚಿತ್ರ.

ಯು.ಕೆ.ಪ್ರೊಡಕ್ಷನ್ಸ್_ ಲಾಂಛನದಲ್ಲಿ ಪೂಜಾವಸಂತಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಉದಯ್ ಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳೀಧರ್
ಅವರ ಸಂಗೀತ ನಿರ್ದೇಶನವಿರುವ ಆನ ಗೆ ವಿಜೇತ್ ಚಂದ್ರ ಅವರ ಸಂಕಲನವಿದೆ.

ಅದಿತಿ ಪ್ರಭುದೇವ, ಸುನೀಲ್ ಪುರಾಣಿಕ್, ಚೇತನ್ ಗಂಧರ್ವ, ರನ್ವಿತ್ ಶಿವಕುಮಾರ್, ವಿಕಾಶ್ ಉತ್ತಯ್ಯ, ಪ್ರೇರಣ ಕಂಬಂಮ್, ವರುಣ್ ಅಮರವಾತಿ, ಸಮರ್ಥ್ ನರಸಿಂಹರಾಜು, ಕಾರ್ತಿಕ್ ನಾಗಾರಾಜನ್, ಶಿವಮಂಜು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Witness the rise of immense power!
TEASER OUT NOW

Be the first to comment

Leave a Reply

Your email address will not be published. Required fields are marked *

Translate »
error: Content is protected !!