ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿರುವ ನಟಿ ಅಭಿನಯಾ, ಅವರ ತಾಯಿ ಹಾಗೂ ಸಹೋದರನಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.
ವರದಕ್ಷಿಣೆ ಕೇಸ್ನಲ್ಲಿ ಜೈಲು ಪಾಲಾಗುವ ಆತಂಕದಲ್ಲಿದ್ದ ನಟಿ ಅಭಿನಯಾ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಅತ್ತಿಗೆ ಲಕ್ಷ್ಮೀದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದ ಪ್ರಕರಣ ಸಂಬಂಧ ಅಭಿನಯಾ, ಅವರ ತಾಯಿ ಜಯಮ್ಮ, ಅಣ್ಣ ಚೆಲುವರಾಜು ವಿರುದ್ಧ 2002ರಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಬಳಿಕ ವಿಚಾರಣೆ ನಡೆಸಿದ್ದ 8ನೇ ಎಸಿಎಂಎಂ ನ್ಯಾಯಾಲಯ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು.
ಇದನ್ನು ಪ್ರಶ್ನಿಸಿ ಆರೋಪಿಗಳು, ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಚ್.ಬಿ. ಪ್ರಭಾಕರ ಶಾಸ್ತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠ, 8ನೇ ಎಸಿಎಂಎಂ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
Be the first to comment