ಅನುಭವ ಚಿತ್ರದ ಖ್ಯಾತಿಯ ಸ್ಯಾಂಡಲ್ ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ಪ್ರಕಟವಾಗಿದೆ.
ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಅರೋಪದಲ್ಲಿ ಹೈಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ.
ಅಭಿನಯ ಅವರ ಅಣ್ಣ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಬೇಡಿಕೆ, ಕಿರುಕುಳ ನೀಡಿದ ಆರೋಪದಲ್ಲಿ ಹೈಕೋರ್ಟ್ ವಿಚಾರಣೆ ನಡೆಸಿ ಶಿಕ್ಷೆ ಪ್ರಕಟಿಸಿದೆ. ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ರಿ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ.
2002ರಲ್ಲಿ ಲಕ್ಷ್ಮೀದೇವಿ ಎಂಬುವವರು ಅಭಿನಯಾ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. 1998ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಅವರನ್ನು ಲಕ್ಷ್ಮೀದೇವಿ ಮದುವೆಯಾಗಿದ್ದರು.
ಮದುವೆ ವೇಳೆ ವರಕ್ಷಿಣೆ ಪಡೆದಿದ್ದಲ್ಲದೆ, ನಂತರವೂ ಪದೇಪದೆ ಹಣ ತರುವಂತೆ ಕಿರುಕುಳ ನೀಡುತ್ತಿದ್ದರು ಎಂದು ದೂರು ದಾಖಲು ಮಾಡಿದ್ದರು.
ಕಾಶೀನಾಥ್ ಅವರ ಅನುಭವ ಸಿನಿಮಾ ತಂದು ಕೊಟ್ಟ ಯಶಸ್ಸಿನ ಬಳಿಕ ಅಭಿನಯ ಸ್ಟಾರ್ ನಟಿ ಎನಿಸಿಕೊಂಡಿದ್ದರು.
__
Be the first to comment